ಭಾರತ ಮೂಲದ ಹಾರ್ವರ್ಡ್ ಪ್ರೊಫೆಸರ್ ಗೀತಾ ಗೋಪಿನಾಥ್ ಐಎಂಎಫ್ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ನೇಮಕ
ಜಾಗತಿಕ ಮಟ್ಟದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸುತ್ತಿರುವವರ ಭಾರತೀಯ ಮೂಲದ ವ್ಯಕ್ತಿಗಳ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ.

Published On :
ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸುತ್ತಿರುವವರ ಭಾರತೀಯ ಮೂಲದ ವ್ಯಕ್ತಿಗಳ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ.
ಭಾರತ ಮೂಲದ ಹಾರ್ವರ್ಡ್ ಪ್ರೊಫೆಸರ್ ಗೀತಾ ಗೋಪಿನಾಥ್ ಐಎಂಎಫ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ರಘುರಾಮ್ ರಾಜನ್ ನಂತರ ಐಎಂಎಫ್ ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ನೇಮಕಗೊಳ್ಳುತ್ತಿರುವ ಎರಡನೇ ಭಾರತೀಯ ಮೂಲದ ವ್ಯಕ್ತಿ ಗೀತಾ ಗೋಪಿನಾಥ್ ಅವರಾಗಿದ್ದಾರೆ.
2018 ರ ಅಂತ್ಯಕ್ಕೆ ಹಾಲಿ ಮುಖ್ಯ ಅರ್ಥಶಾಸ್ತ್ರಜ್ಞರಾದ ಮೌರಿಸ್ (ಮೌರಿ) ಅಬ್ಸ್ಟ್ಫೆಲ್ಡ್ ನಿ ನಿವೃತ್ತರಾಗಲಿದ್ದಾರೆ. ಗೀತಾ ಗೋಪಿನಾಥ್ ಅವರು ಪ್ರಸ್ತುತ ಹಾರ್ವರ್ಡ್ ವಿವಿಯ ಜಾನ್ ಜ್ವಾನ್ಸ್ಟ್ರಾ ಆಫ್ ಇಂಟರ್ ನ್ಯಾಷನಲ್ ಸ್ಟಡೀಸ್, ಎಕನಾಮಿಕ್ಸ್ ವಿಭಾಗದ ಪ್ರೊಫೆಸರ್ ಆಗಿದ್ದಾರೆ.
2016 ರಲ್ಲಿ ಗೀತಾ ಗೋಪಿನಾಥನ್ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಆದರೆ ಗೀತಾ ಗೋಪಿನಾಥ್ ಅವರು ಮಾರುಕಟ್ಟೆ ಆರ್ಥಿಕತೆ ಮತ್ತು ಉದಾರ ನೀತಿಗಳನ್ನು ಹೆಚ್ಚು ಉತ್ತೇಜಿಸುತ್ತಿದ್ದರಾದ್ದರಿಂದ ಸಿಪಿಎಂ ನಾಯಕರು ಆಕೆಯ ನೇಮಕಾತಿಯನ್ನು ವಿರೋಧಿಸಿದ್ದರು.
ದೆಹಲಿ ವಿವಿಯಿಂದ ಬಿಎ ಪದವಿ ಪಡೆದ ಬಳಿಕ ಗೀತಾ ಗೋಪಿನಾಥ್ ಅವರು ಪ್ರಿನ್ಸ್ಟನ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ವಿಭಾದಲ್ಲಿ ಪಿಹೆಚ್ ಡಿ ಪದವಿ ಪಡೆದಿದ್ದರು. 2005 ರಲ್ಲಿ ಹಾರ್ವರ್ಡ್ ವಿವಿಯನ್ನು ಸೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


