ವಿದೇಶ

ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯಲ್ಲಿ ಹಿಂದಿ, ಸಂಸ್ಕೃತ ತರಗತಿಗಳು ಶೀಘ್ರವೇ ಪ್ರಾರಂಭ

ಅಮೆರಿಕದಲ್ಲಿ ಭಾರತೀಯ ಭಾಷೆಗಳಾದ ಸಂಸ್ಕೃತ ಮತ್ತು ಹಿಂದಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಕಚೇರಿ ಹಿಂದಿ, ಸಂಸ್ಕೃತ ಭಾಷೆ ಕಲಿಕೆಯ ತರಗತಿಗಳನ್ನು ಆಯೋಜಿಸಲಿದೆ.

ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯಲ್ಲಿ ಹಿಂದಿ, ಸಂಸ್ಕೃತ ತರಗತಿಗಳು ಶೀಘ್ರವೇ ಪ್ರಾರಂಭ
ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯಲ್ಲಿ ಹಿಂದಿ, ಸಂಸ್ಕೃತ ತರಗತಿಗಳು ಶೀಘ್ರವೇ ಪ್ರಾರಂಭ
Published On :
ವಾಷಿಂಗ್ ಟನ್: ಅಮೆರಿಕದಲ್ಲಿ ಭಾರತೀಯ ಭಾಷೆಗಳಾದ ಸಂಸ್ಕೃತ ಮತ್ತು ಹಿಂದಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಕಚೇರಿ ಹಿಂದಿ, ಸಂಸ್ಕೃತ ಭಾಷೆ ಕಲಿಕೆಯ ತರಗತಿಗಳನ್ನು ಆಯೋಜಿಸಲಿದೆ. 
ಈ ಬಗ್ಗೆ ಭಾರತೀಯ ರಾಯಭಾರಿ ಘೋಷಣೆ ಮಾಡಿದ್ದು ಶೀಘ್ರವೇ ತರಗತಿಗಳು ಪ್ರಾರಂಭವಾಗಲಿವೆ. ಭಾರತೀಯ ರಾಯಭಾರಿ ಕಚೇರಿಯಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ತರಗತಿ ನಡೆಸಲಿರುವ ಡಾ.ಮಾಕ್ಸ್ ರಾಜ್ ಅವರೇ ಎರಡೂ ಭಾಷೆಗಳ ತರಗತಿಗಳನ್ನು ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 
ಹಿಂದಿ ತರಗತಿಗಳನ್ನು ಪ್ರತಿ ಮಂಗಳವಾರ ಸಂಜೆ 6-7 ವರೆಗೆ ಹಾಗೂ ಸಂಸ್ಕೃತ ತರಗತಿಗಳನ್ನು ಗುರುವಾರ ಸಂಜೆ 6-7 ವರೆಗೆ ನಡೆಸಲು ಉದ್ದೇಶಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.