ವಿದೇಶ

ಅಮೆರಿಕ ಮಾಜಿ ಅಧ್ಯಕ್ಷರ ಮನೆಗೆ ಬಾಂಬ್: ಫ್ಲೋರಿಡಾದಲ್ಲಿ ಶಂಕಿತನ ಬಂಧನ

ಅಮೆರಿಕ ಮಾಜಿ ಅಧ್ಯಕ್ಷರ ಮನೆಗಳೂ ಸೇರಿದಂತೆ 12 ಕಡೆಗಳಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಶಂಕಿತ ವ್ಯಕ್ತಿಯೋರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷರ ಮನೆಗೆ ಬಾಂಬ್: ಫ್ಲೋರಿಡಾದಲ್ಲಿ ಶಂಕಿತನ ಬಂಧನ
ಸಂಗ್ರಹ ಚಿತ್ರ
Published On :
ಫ್ಲೋರಿಡಾ: ಅಮೆರಿಕ ಮಾಜಿ ಅಧ್ಯಕ್ಷರ ಮನೆಗಳೂ ಸೇರಿದಂತೆ 12 ಕಡೆಗಳಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಶಂಕಿತ ವ್ಯಕ್ತಿಯೋರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಟೀಕಾಕಾರರಿಗೆ 'ಸಂಶಯಾಸ್ಪದ' ಪ್ಯಾಕೆಟ್ ಗಳು ಹಾಗು ಪೈಪ್ ಬಾಂಬ್ ಗಳನ್ನು ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿಯೋರ್ವನನ್ನು ಇಂದು ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ. 
ಈ ಬಗ್ಗೆ ಅಮೆರಿಕ ಮಾಧ್ಯಮಗಳು ವರದಿ ಬಿತ್ತರಿಸಿದ್ದು, ಶಂಕೆಯ ಮೇರೆಗೆ ಫ್ಲೋರಿಡಾದಲ್ಲಿ ವ್ಯಕ್ತಿಯೋರ್ವನ್ನು ಬಂಧಿಸಲಾಗಿದೆ ಎಂದು ವರದಿ ಮಾಡಿವೆ.
ಇನ್ನು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಹಿಲರಿ ಕ್ಲಿಂಟನ್, ಹಾಲಿವುಡ್ ನಟ ರಾಬರ್ಟ್ ಡೆ ನಿರೋ ಹಾಗೂ ಹಲವು ಗಣ್ಯರ ವಿಳಾಸಕ್ಕೆ ಶಂಕಿತ ಪೊಟ್ಟಣಗಳನ್ನು ಕಳುಹಿಸಲಾಗಿತ್ತು. ಅಚ್ಚರಿ ವಿಚಾರವೆಂದರೆ ಇವರೆಲ್ಲರೂ ಒಂದಿಲ್ಲೊಂದು ಕಾರಣಗಳಿಂದಾಗಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಟೀಕಿಸಿ ಅಮೆರಿಕ ಸರ್ಕಾರದ ಕೆಂಗಣ್ಣಿಗೆ ತುತ್ತಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.