ಲಂಕಾ ರಾಜಕೀಯ ಬಿಕ್ಕಟ್ಟು: ಗುಂಡು ಹಾರಿಸಿದ ಉಚ್ಚಾಟಿತ ಸಚಿವರ ಅಂಗರಕ್ಷಕ, ಮೂವರಿಗೆ ಗಾಯ
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ...

Published On :
ಕೊಲಂಬೊ: ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರನ್ನು ಭಾನುವಾರ ಒತ್ತೆಯಾಳಾಗಿಸಲು ಯತ್ನಿಸಿದಾಗ ಅವರ ಅಂಗರಕ್ಷಕರು ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಅರ್ಜುನ ರಣತುಂಗ ಅವರು ಇಂದು ಸೆಲಾನ್ ಪೆಟ್ರೋಲಿಯಂ ಕಾರ್ಪೋರೇಷನ್ ನಲ್ಲಿರುವ ತಮ್ಮ ಕಚೇರಿಗೆ ತೆರಳುವ ವೇಳೆ ಜನರ ಗುಂಪೊಂದು ಅವರನ್ನು ಒತ್ತೆಯಾಳಾಗಿಸಲು ಯತ್ನಿಸಿದ್ದು, ಈ ವೇಳೆ ಅವರ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಅವರು ತಿಳಿಸಿದ್ದಾರೆ.
ಕಳೆದ ಶುಕ್ರವಾರ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಉಚ್ಚಾಟಿಸಿ, ಮಹಿಂದ ರಾಜಪಕ್ಸ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದಾರೆ.
ಅಧ್ಯಕ್ಷ ಸಿರಿಸೇನಾ ಅವರ ನಿರ್ಧಾರ ಅಕ್ರಮ ಮತ್ತು ಅಸಂವಿಧಾನಿಕ ಎಂದಿರುವ ವಿಕ್ರಮಸಿಂಘೆ ಅವರು, ತಾವು ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sri Lankaಶ್ರೀಲಂಕಾ3 Injuredಮೂವರಿಗೆ ಗಾಯguard of sacked minister opens fireಗುಂಡು ಹಾರಿಸಿದ ಉಚ್ಚಾಟಿತ ಸಚಿವರ ಅಂಗರಕ್ಷಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


