ವಿದೇಶ

ಕ್ಯಾಲಿಫೋರ್ನಿಯಾದಲ್ಲಿ 800 ಅಡಿ ಪ್ರಪಾತಕ್ಕೆ ಬಿದ್ದು ದುರಂತ ಅಂತ್ಯ ಕಂಡ ಭಾರತ ಮೂಲದ ದಂಪತಿ: ವರದಿ

ಅಪಾಯಕಾರಿ ಪ್ರವಾಸಿ ತಾಣ ವೀಕ್ಷಣೆಗೆಂದು ತೆರಳಿದ್ದ ಭಾರತ ಮೂಲದ ದಂಪತಿಗಳು ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.

ಕ್ಯಾಲಿಫೋರ್ನಿಯಾದಲ್ಲಿ 800 ಅಡಿ ಪ್ರಪಾತಕ್ಕೆ ಬಿದ್ದು ದುರಂತ ಅಂತ್ಯ ಕಂಡ ಭಾರತ ಮೂಲದ ದಂಪತಿ: ವರದಿ
ದುರಂತ ಅಂತ್ಯಕಂಡ ದಂಪತಿ
Published On :
ನ್ಯೂಯಾರ್ಕ್​: ಅಪಾಯಕಾರಿ ಪ್ರವಾಸಿ ತಾಣ ವೀಕ್ಷಣೆಗೆಂದು ತೆರಳಿದ್ದ ಭಾರತ ಮೂಲದ ದಂಪತಿಗಳು ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಕ್ಯಾಲಿಫೋರ್ನಿಯಾದ ಖ್ಯಾತ ರಾಷ್ಟ್ರೀಯ ಉದ್ಯಾನದಲ್ಲಿ ಭಾರತೀಯ ಮೂಲದ ದಂಪತಿಗಳಾದ ವಿಷ್ಣು ವಿಶ್ವನಾಥ್​ (29 ವರ್ಷ) ಮತ್ತು ಮೀನಾಕ್ಷಿ ಮೂರ್ತಿ (30 ವರ್ಷ)  ಎಂಬುವವರು ಸುಮಾರು 800 ಅಡಿ ಪ್ರಪಾತದಿಂದ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ. 
ಈ ಜೋಡಿ ರ್ಯಾಲಿಫೋರ್ನಿಯಾದ ಯೊಸೆಮೈಟ್ ನ್ಯಾಷನಲ್​ ಪಾರ್ಕ್​ ನ ಬೆಟ್ಟದ ತುತ್ತತುದಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೊಸೆಮೈಟ್ ನ್ಯಾಷನಲ್​ ಪಾರ್ಕ್ ಯೊಸೆಮೈಟ್ ವ್ಯಾಲಿ, ಯೊಸೆಮೈಟ್ ಫಾಲ್ಸ್ ಮತ್ತು ಎಲ್ ಕ್ಯಾಪಿಟನ್ ವೀಕ್ಷಣೆಗೆ ಈ ಜೋಡಿ ತೆರಳಿದ್ದು ಈ ವೇಳೆ ಪಾರ್ಕ್ ನ ತುತ್ತತುದಿಯಲ್ಲಿ ನಿಂತು ಪೋಟೋ ಕ್ಲಿಕ್ಕಿಸುವಾಗ ಆಕಸ್ಮಿಕವಾಗಿ ಜಾರಿ ಪ್ರಪಾತಕ್ಕೆ ಬಿದ್ದಿದ್ದಾರೆ.
ಬೆಟ್ಟದ ತುದಿಯಿಂದ ಕೆಳಗೆ ಬಿದ್ದ ಪುರುಷ ಹಾಗೂ ಮಹಿಳೆಯ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಕ್ಟೋಬರ್ 25ರಂದೇ ನ್ಯಾಷನಲ್​ ಪಾರ್ಕ್​ ಅಧಿಕೃತ ಹೇಳಿಕೆ ನೀಡಿತ್ತು. ಆದರೆ ಸೋಮವಾರ ಈ ಮೃತ ದಂಪತಿ ಭಾರತದ ಮೂಲದವರು ಎಂದು ತಿಳಿದು ಬಂದಿದೆ. 
ದಂಪತಿ ಪ್ರಪಾತಕ್ಕೆ ಬಿದ್ದಿರುವುದರ ಕುರಿತು ನಮಗಿನ್ನೂ ಕಾರಣ ತಿಳಿದು ಬಂದಿಲ್ಲ. ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಇನ್ನೂ ಅರ್ಥೈಸಿಕೊಳ್ಳುತ್ತಿದ್ದೇವೆ. ಸದ್ಯದ ಪರಿಸ್ಥಿತಿ ನೋಡಿದರೆ ಈ ಕುರಿತು ಸ್ಪಷ್ಟ ಮಾಹಿತಿ ಸಿಗುವುದಿಲ್ಲ ಎಂದೆನಿಸುತ್ತದೆ. ಆದರೆ ಇದೊಂದು ದುರಂತ ಅಂತ್ಯ ಎಂದು ನ್ಯಾಷನಲ್​ ಪಾರ್ಕ್​ನ ವಕ್ತಾರ ಜೇಮ್​ ರಿಚರ್ಡ್​ ತಿಳಿಸಿದ್ದಾರೆ.
ಇನ್ನು ಕಳೆದ ಹಲವು ವರ್ಷಗಳಿಂದ ಈ ಜೋಡಿ ಅಮೆರಿಕದಲ್ಲಿ ನೆಲೆಸಿದ್ದು, ಅಮೆರಿಕದ ಸಿಸ್ಕೊ ಸಂಸ್ಥೆಯಲ್ಲಿ ಸಿಸ್ಟಮ್​ ಇಂಜಿನಿಯರ್​ ಆಗಿ ಕೆಲಸ ಸಿಕ್ಕಮೇಲೆ ಈ ದಂಪತಿ ನ್ಯೂಯಾರ್ಕ್​ನಿಂದ ಅಮೆರಿಕಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ದಂಪತಿಗೆ ವಿಶ್ವ ಸುತ್ತುವ ಕನಸಿತ್ತು ಎಂಬುದನ್ನು ಅವರೇ ತಮ್ಮ 'Holidays and HappilyEverAfters' ಎಂಬ ಬ್ಲಾಗ್​ನಲ್ಲಿ ಬರೆದಿಕೊಂಡಿದ್ದಾರೆ. ಅಲ್ಲದೆ ತಮ್ಮ ಪ್ರವಾಸದ ಫೋಟೋಗಳನ್ನು ಮತ್ತು ಅನುಭವವನ್ನು ನಿಯಮಿತವಾಗಿ ಬ್ಲಾಗ್ ನಲ್ಲಿ ಬರೆಯುತ್ತಿದ್ದರಂತೆ.
ವೃತ್ತಿಯಲ್ಲಿ ಇಬ್ಬರೂ ಸಾಫ್ಟ್​ವೇರ್​ ಇಂಜಿನಿಯರ್​ಗಳಾಗಿದ್ದರು ಹಾಗೂ ನಮ್ಮ ಕಾಲೇಜಿನಲ್ಲಿ 2006ರಿಂದ 2010ರವರೆಗೆ ಕಂಪ್ಯೂಟರ್​ ಸೈನ್ಸ್​ ಮತ್ತು ಇಂಜಿನಿಯರಿಂಗ್​ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದರು ಎಂದು ಚೆಂಗನ್ನೂರ್​ ಎಂಜಿನಿಯರಿಂಗ್​ ಕಾಲೇಜಿನ ಹೆಸರಿನ ಫೇಸ್​ಬುಕ್ ​ ಪೋಸ್ಟ್​ನಲ್ಲಿ ಬರೆದುಕೊಳ್ಳಲಾಗಿದೆ. 2014ರಲ್ಲಿ ಮೃತ ದಂಪತಿ ಮದುವೆಯಾಗಿದ್ದರು ಎನ್ನಲಾಗಿದ್ದು, ವಿಷ್ಣುವಿನ ಫೇಸ್​ ಬುಕ್​ನಲ್ಲಿ ಆತನ ಸ್ನೇಹಿತರು ದಂಪತಿಯ ಆಕಸ್ಮಿಕ ಮರಣಕ್ಕೆ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.