ವಿದೇಶ

ಭಾರತದ ಗಣರಾಜ್ಯೋತ್ಸವಕ್ಕೆ ಟ್ರಂಪ್ ಬರಲು ಆಗಲ್ಲ: ಶ್ವೇತಭವನ ಕೊಟ್ಟ ಕಾರಣ?

ಭಾರತದ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಕೊಳ್ಳಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರಾಕಸಿದ್ದು, ಇದಕ್ಕೆ ಶ್ವೇತಭವನ ಮಂಗಳವಾರ ಕಾರಣ ನೀಡಿದೆ...

ಭಾರತದ ಗಣರಾಜ್ಯೋತ್ಸವಕ್ಕೆ ಟ್ರಂಪ್ ಬರಲು ಆಗಲ್ಲ: ಶ್ವೇತಭವನ ಕೊಟ್ಟ ಕಾರಣ?
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ವಾಷಿಂಗ್ಟನ್: ಭಾರತದ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಕೊಳ್ಳಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರಾಕಸಿದ್ದು, ಇದಕ್ಕೆ ಶ್ವೇತಭವನ ಮಂಗಳವಾರ ಕಾರಣ ನೀಡಿದೆ. 
ಸಮಯದ ಅಭಾವ ಹಾಗೂ ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ನವದೆಹಲಿಯಲ್ಲಿ ಜ.26ರ ಗಣರಾಜ್ಯೋತ್ಸವ ದಿನದ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ಅವರು, ಗಣರಾಜ್ಯೋತ್ಸವದ ದಿನದಂದು ಅತಿಥಿಯಾಗಿ ಬರುವಂತೆ ಭಾರತದಿಂದ ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ನಿರ್ಧಾರನಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ವರ್ಷ ವಾಷಿಂಗ್ಟನ್'ನಲ್ಲಿ ನಡೆದ ಮಾತುಕತೆ ವೇಳೆ ಭಾರತಕ್ಕೆ ಭೇಟಿ ನೀಡುವಂತೆ ಟ್ರಂಪ್ ಅವರಿಗೆ ಆಹ್ವಾನ ನೀಡಿದ್ದರು. 
ಪ್ರಧಾನಿ ಮೋದಿಯವರು ಟ್ರಂಪ್ ಅವರಿಗೆ ಗಣರಾಜ್ಯೋತ್ಸವ ದಿನದಂದು ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಮಂತ್ರಣ ನೀಡಿ ಗೌರವ ಸೂಚಿಸಿದ್ದರು. 
2015ರಲ್ಲಿ ಅಮೆರಿಕಾದ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರು ಮುಖ್ಯ ಅತಿಥಿಯಾಗಿ ಭಾಗವಿಸಿದ್ದರು. 2016ರಲ್ಲಿ ಫ್ರಾನ್ಸ್'ನ ಆಗಿನ ಅಧ್ಯಕ್ಷ ಹೋಲ್ಯಾಂಡೋ ಅವರು ಪಾಲ್ಗೊಂಡಿದ್ದರು. ಈ ವರ್ಷದ ಸಮಾರಂಭದಲ್ಲಿ ಆಸಿಯಾನ್ ದೇಶಗಳ 10 ನಾಯಕರು ಮುಖ್ಯ ಅತಿಥಿಗಳಾಗಿ ಹಾಜರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.