ಪಾಕ್ ಸರ್ಕಾರಕ್ಕೆ ಸಂಕಷ್ಟ, 300 ಮಿಲಿಯನ್ ಡಾಲರ್ ಭದ್ರತಾ ನೆರವಿಗೆ ಅಮೆರಿಕ ಕತ್ತರಿ
ನಿರೀಕ್ಷೆಯಂತೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಸರ್ಕಾರ ಪಾಕಿಸ್ತಾನಕ್ಕೆ ನೀಡುತ್ತಿದ್ದ ಸುಮಾರು 300 ಮಿಲಿಯನ್ ಡಾಲರ್ ಮೊತ್ತದ ಭದ್ರತಾ ಆರ್ಥಿಕ ನೆರವಿಗೆ ಕತ್ತರಿ ಹಾಕಿದೆ.

Published On :
ವಾಷಿಂಗ್ಟನ್: ನಿರೀಕ್ಷೆಯಂತೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಸರ್ಕಾರ ಪಾಕಿಸ್ತಾನಕ್ಕೆ ನೀಡುತ್ತಿದ್ದ ಸುಮಾರು 300 ಮಿಲಿಯನ್ ಡಾಲರ್ ಮೊತ್ತದ ಭದ್ರತಾ ಆರ್ಥಿಕ ನೆರವಿಗೆ ಕತ್ತರಿ ಹಾಕಿದೆ.
ಈ ಬಗ್ಗೆ ಪೆಂಟಗನ್ ನಲ್ಲಿ ನಡೆದ ಮಹತ್ವದ ರಕ್ಷಣಾ ಇಲಾಖೆಯ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಅಮೆರಿಕದಿಂದ ಪಾಕಿಸ್ತಾನ ಸರ್ಕಾರಕ್ಕೆ ನೀಡಲಾಗುತ್ತಿದ್ದ 300 ಮಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪೆಂಟಗನ್ ವಕ್ತಾರರಾದ ಫಿಲ್ ಸ್ಟೆವಾರ್ಟ್ ಮತ್ತು ಇಡ್ರೀಸ್ ಅವರು, ಉಗ್ರ ನಿಗ್ರಹ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರದ ಪ್ರಯತ್ನಗಳು ನಿರಾಶಾದಾಯಕವಾಗಿದೆ. ಈ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ಅಮೆರಿಕ ಮನವಿ ಮಾಡಿದ್ದರೂ ಹೇಳಿಕೊಳ್ಳುವಂತಹ ಪ್ರಗತಿಯಾಗಿಲ್ಲ. ಹೀಗಾಗಿ ಟ್ರಂಪ್ ಸರ್ಕಾರ ಅನಿವಾರ್ಯವಾಗಿ ಆರ್ಥಿಕ ಭದ್ರತಾ ನೆರವನ್ನು ರದ್ದುಗೊಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ 17 ವರ್ಷಗಳಿಂದ ನೆರೆಯ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಕಾರಣವಾಗಿರುವ ಉಗ್ರಗಾಮಿಗಳು ಪಾಕಿಸ್ತಾನದಲ್ಲಿ ನೆರವು ಪಡೆದಿದ್ದಾರೆ. ಅವರಿಗೆ ಪಾಕಿಸ್ತಾನ ಸ್ವರ್ಗವಾಗಿದ್ದು, ಈ ಬಗ್ಗೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಅಮೆರಿಕ ಸರ್ಕಾರ ಮನವಿ ಮಾಡಿತ್ತು. ಆದರೆ ಪಾಕಿಸ್ತಾನದಿಂದ ಪೂರಕ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


