ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪ, ರಾಯಿಟರ್ಸ್ ನ 2 ಪತ್ರಕರ್ತರಿಗೆ 7 ವರ್ಷ ಜೈಲು!
ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Published On :
ಯಂಗೋನ್: ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ರೊಹಿಂಗ್ಯಾ ಕಗ್ಗೊಲೆ ಪ್ರಕರಣದ ವರದಿ ಮಾಡಿದ್ದ ವಾ ಲೋನ್ ಮತ್ತು ಕ್ಯಾ ಸೂ ಓ ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಬ್ಬರೂ ಪತ್ರಕರ್ತರ ವಿರುದ್ಧ ಅಧಿಕೃತ ರಹಸ್ಯ ದಾಖಲೆ ರಕ್ಷಣೆ ಕಾಯ್ದೆಯಡಿ ದೂರು ದಾಖಲಾಗಿತ್ತು.
ಇನ್ನು ಪತ್ರಿಕಾ ಸ್ವಾತಂತ್ರ್ಯ ಹಾಗೂ ಮಾನವ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಪತ್ರಕರ್ತರ ಬಂಧನಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಹಲವಾರು ದೇಶಗಳಲ್ಲಿ ಪ್ರತಿಭಟನೆ ಸಹ ನಡೆದಿತ್ತು.
ಏನಿದು ಘಟನೆ?
ಕಳೆದ ಡಿಸೆಂಬರ್ನಲ್ಲಿ ಮಯನ್ಮಾರ್ನ ರಖಿನೇ ರಾಜ್ಯದಲ್ಲಿ ಸುಮಾರು ನೂರು ಮಂದಿ ರೋಹಿಂಗ್ಯಾ ಮುಸ್ಲಿಮರ ಕಗ್ಗೊಲೆ ನಡೆದಿತ್ತು. ಈ ವೇಳೆ ಪುರುಷರು, ಮಹಿಳೆಯರು ಹಾಗೂ ಸಾಕಷ್ಟು ಮಂದಿ ಬಾಲಕರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್ನ ಈ ಇಬ್ಬರು ಪತ್ರಕರ್ತರು ತನಿಖಾ ಪತ್ರಿಕೋದ್ಯಮ ಆರಂಭಿಸಿದ್ದರು. ಈ ವೇಳೆ ಮಯನ್ಮಾರ್ ಮಿಲಿಟರಿ ಶಿಸ್ತುಕ್ರಮದ ಸಮಯದಲ್ಲಿ ಈ ಕೊಲೆಗಳು ನಡೆದಿದ್ದವು ಎಂದು ವರದಿ ನೀಡಿದ್ದರು.
ಈ ಸಂಬಂಧ ತನಿಖೆ ನಡೆಸಿದ್ದ ಮಯನ್ಮಾರ್ ಪೊಲೀಸರು ರೆಸ್ಟೊರೆಂಟ್ ಒಂದರಲ್ಲಿ ಕೆಲವು ರಹಸ್ಯ ಪೇಪರ್ ಗಳನ್ನು ನೀಡಿದ ಸಂದರ್ಭದಲ್ಲಿ ಬಂಧಿಸಿದ್ದರು. ಈ ವೇಳೆ ಇಬ್ಬರು ಪತ್ರಕರ್ತರ ವಿರುದ್ಧ ಅಧಿಕೃತ ರಹಸ್ಯ ಮಾಹಿತಿ ರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಕೋರ್ಟ್ ಇಂದು ತನ್ನ ತೀರ್ಪು ನೀಡಿದ್ದು, ಅನಧಿಕೃತವಾಗಿ ತನಿಖೆ ನಡೆಸಿ ಗೌಪ್ಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ ಎಂದು ಹೇಳಿದೆ. ಅಲ್ಲದೆ ಇಬ್ಬರೂ ಪತ್ರಕರ್ತರಿಗೂ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Myanmarಮಯನ್ಮಾರ್Official Secrets Actರೊಹಿಂಗ್ಯಾ ವಿವಾದRohingya RowReutersReporters Arrestedರಾಯಿಟರ್ಸ್ವರದಿಗಾರರ ಬಂಧನಅಧಿಕೃತ ರಹಸ್ಯ ಮಾಹಿತಿ ಕಾಯ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


