ವಿದೇಶ

ಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ

ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದರು.

ಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ
ಚೀನಾ, ಪಾಕಿಸ್ತಾನ ವಿದೇಶಾಂಗ ಸಚಿವರು
Published On :

ಇಸ್ಲಾಮಾಬಾದ್ :ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ   50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ  ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್  ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ  ಮಾತುಕತೆ ನಡೆಸಿದರು.

ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ  ಚೀನಾದ ಉನ್ನತ ಅಧಿಕಾರಿಗಳ ತಂಡ ಇಸ್ಲಾಮಾಬಾದ್ ಗೆ ತೆರಳಿ ದ್ವಿಪಕ್ಷೀಯ ಮಾತುಕತೆ ನಡೆಸಿದೆ.

ಪ್ರಾದೇಶಿಕ ಭದ್ರತೆ, ಅಪ್ಘಾನಿಸ್ತಾನದಲ್ಲಿ ಶಾಂತಿ ಪ್ರಕ್ರಿಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಉಭಯ ನಾಯಕರು   ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಚೀನಾ ಹಾಗೂ ಪಾಕಿಸ್ತಾನ ನಡುವಣ ಸ್ನೇಹ ಸಂಬಂಧ ಹೆಮ್ಮೆಪಡುವಂತಾದ್ದಾಗಿದೆ ಎಂದು ಸಭೆಯ ಬಳಿಕ ಖುರೇಷಿ ತಿಳಿಸಿದ್ದು, ಚೀನಾ -ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ ಆದ್ಯತೆ ಮೇಲೆ ಕೈಗೊಳ್ಳಲು ಚೀನಾ ಬದ್ಧವಾಗಿರುವುದಾಗಿ ಭರವಸೆ ನೀಡಿದೆ ಎಂದು ತಿಳಿದುಬಂದಿದೆ.

ಚೀನಾ ದೇಶಕ್ಕೆ ಮುಖ್ಯ ಅತಿಥಿಗಳಾಗಿ  ಆಗಮಿಸುವಂತೆ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಚೀನಾ ವಿದೇಶಾಂಗ ಸಚಿವರು ಆಹ್ವಾನಿಸಿದ್ದು, ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಅವರನ್ನು ಭೇಟಿ ಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.