ವಿದೇಶ

ಪಾಕಿಸ್ತಾನ: ಮೊದಲ ವಿದೇಶ ಪ್ರವಾಸಕ್ಕೆ ಸೌದಿ ಆಯ್ಕೆ ಮಾಡಿದ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಮೊದಲ ವಿದೇಶಿ ಪ್ರವಾಸಕ್ಕೆ ಸೌದಿ ಅರೇಬಿಯಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕಿಸ್ತಾನ: ಮೊದಲ ವಿದೇಶ ಪ್ರವಾಸಕ್ಕೆ ಸೌದಿ ಆಯ್ಕೆ ಮಾಡಿದ ಪ್ರಧಾನಿ ಇಮ್ರಾನ್ ಖಾನ್
ಸಂಗ್ರಹ ಚಿತ್ರ
Published On :
ಇಸ್ಲಾಮಾಬಾದ್: ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಮೊದಲ ವಿದೇಶಿ ಪ್ರವಾಸಕ್ಕೆ ಸೌದಿ ಅರೇಬಿಯಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಇಮ್ರಾನ್ ಖಾನ್ ಕಚೇರಿ ಮಾಹಿತಿ ನೀಡಿದ್ದು, ಇದೇ ಸೆಪ್ಟೆಂಬರ್ 18 ರಿಂದ ಇಮ್ರಾನ್ ಖಾನ್ ತಮ್ಮ 2 ದಿನಗಳ ಸೌದಿ ಪ್ರವಾಸ ಆರಂಭಿಸಲಿದ್ದಾರೆ. ಈ ವೇಳೆ ಇಮ್ರಾನ್ ಖಾನ್ ಸೌದಿ ದೊರೆ ಸಲ್ಮಾನ್ ಬಿನ್ ಅಬುಲಾಜಿಜ್ ಮತ್ತು ದೊರೆ ಮೊಹಮದ್ ಬಿನ್ ಸಲ್ಮಾನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ರಿಯಾದ್ ನಲ್ಲಿ ಉಭಯ ನಾಯಕರು ಪರಸ್ಪರ ಭೇಟಿಯಾಗುವ ಸಾಧ್ಯತೆ ಇದ್ದು, ಈ ವೇಳೆ ಹಲವು ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಇನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ಪಾಕ್ ವಿದೇಶಾಂಗ ಸಚಿವರು, ವಿತ್ತ ಸಚಿವಾಲಯದ ಸಲಹೆಗಾರರು ತೆರಳಲಿದ್ದು, ಸೌದಿ ಸಚಿವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸೌದಿ ಅರೇಬಿಯಾ ಬಳಿಕ ಇಮ್ರಾನ್ ಖಾನ್ ಸೆಪ್ಟೆಂಬರ್ 19ರಂದು ಯುಎಇಗೆ ತೆರಳಲಿದ್ದು, ಕಿಂಗ್ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.