ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ
ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಬ್ರಿಟನ್ ಮೂಲದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಗಡೀಪಾರಿಗೆ ದುಬೈನ ನ್ಯಾಯಾಲಯ ಆದೇಶಿಸಿದೆ.

Published On :
ದುಬೈ: ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಬ್ರಿಟನ್ ಮೂಲದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಗಡಿಪಾರಿಗೆ ದುಬೈನ ನ್ಯಾಯಾಲಯ ಆದೇಶಿಸಿದೆ.
ಇಟಲಿ ಮೂಲದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಗಡೀಪಾರಿಗೆ ದುಬೈ ಕೋರ್ಟ್ ಆದೇಶಿಸಿದೆ. ಈ ಹಿಂದೆ ಮೈಕೆಲ್ ನನ್ನು ಕಳೆದ ವರ್ಷ ಯುಎಎಇಯಲ್ಲಿ ಬಂಧಿಸಲಾಗಿ, ಗಡೀಪಾರು ಸಂಬಂಧ ವಿಚಾರಣೆ ನಡೆಸಲಾಗುತ್ತಿತ್ತು.
ಇಟಲಿ ಮೂಲದ ಫಿನ್ ಮೆಕಾನಿಕಾ ಸಂಸ್ಥೆಯ ಬ್ರಿಟನ್ ನ ಅಂಗಸಂಸ್ಥೆಯಾದ ಅಗಸ್ಟಾ ವೆಸ್ಟ್ ಲ್ಯಾಂಡ್ ಸಂಸ್ಥೆಯೊಂದಿಗೆ ಭಾರತದ ವಿವಿಐಪಿಗಳ ಪ್ರಯಾಣಕ್ಕೆಂದು 12 'ಎಡಬ್ಲ್ಯೂ-101' ಹೆಲಿಕಾಪ್ಟರ್ ಗಳನ್ನು ಖರೀದಿಸುವ ಒಪ್ಪಂದಕ್ಕೆ 2007ರಲ್ಲಿ ಸಹಿ ಭಾರತ ಸರ್ಕಾರ ಸಹಿ ಹಾಕಿತ್ತು. ನಂತರ ಈ ಒಪ್ಪಂದದಲ್ಲಿ ರೂ3,227 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಒಪ್ಪಂದ ಕುದುರಿಸುವ ಸಲುವಾಗಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಲಂಚ ಪಾವತಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ನಂತರ 2014ರ ಜನವರಿಯಲ್ಲಿ ಕೇಂದ್ರ ಸರ್ಕಾರ ಒಪ್ಪಂದವನ್ನು ರದ್ದುಗೊಳಿಸಿತ್ತು.
ಹಗರಣಕ್ಕೆ ಸಂಬಂಧಿಸಿ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿ ಸೇರಿದಂತೆ 72 ಜನರನ್ನು ಬಂಧಿಸಲಾಗಿತ್ತು. ಇತ್ತೀಚೆಗಷ್ಟೇ ತ್ಯಾಗಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.
ಅಂತೆಯೇ ಹಗರಣದ ಪ್ರಮುಖ ಮಧ್ಯವರ್ತಿಯಾಗಿರುವ ಕಾರ್ಲೊ ಗೆರೊಸಾ ಅವರನ್ನು ಭಾರತಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಇತ್ತೀಚೆಗಷ್ಟೇ ಇಟಲಿ ಸರ್ಕಾರ ಹೇಳಿತ್ತು. ಸಿಬಿಐ ಆಗ್ರಹದ ಮೇರೆಗೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ನೀಡಿದ ನಂತರ ಇಟಲಿ ಸರ್ಕಾರ ಕಳೆದ ಅಕ್ಟೋಬರ್‍ನಲ್ಲಿ ಗೊರೊಸಾ ಅವರನ್ನು ಬಂಧಿಸಿತ್ತು. ಇದೀಗ ಪ್ರಕರಣದ ವಿಚಾರಣೆ ಕುತೂಹಲಕಾರಿ ಘಟ್ಟದಲ್ಲಿದ್ದು, ರಾಯಭಾರಿ ಹಂತದಲ್ಲಿ ಭಾರತ ಈ ಪ್ರಕರಣದ ಕುರಿತು ವ್ಯವಹರಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DubaiದುಬೈAgustaWestlandಅಗಸ್ಟಾ ವೆಸ್ಟ್ ಲ್ಯಾಂಡ್Christian Michelಕ್ರಿಸ್ಟಿಯನ್ ಮೈಕೆಲ್VVIP chopper caseDubai Courtವಿವಿಐಪಿ ಚಾಪರ್ ಖರೀದಿ ಹಗರಣದುಬೈ ಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


