ಪ್ರಧಾನಿ ಮೋದಿ, ಮ್ಯಾಕ್ರೋನ್ ಗೆ 'ಚಾಂಫಿಯನ್ ಆಫ್ ದಿ ಅರ್ಥ್' ಪ್ರಶಸ್ತಿ !
ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ವಿಶ್ವಸಂಸ್ಥೆಯ ಚಾಂಫಿಯನ್ ಆಪ್ ದಿ ಅರ್ಥ್ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ವಿಶ್ವಸಂಸ್ಥೆಯ ಚಾಂಫಿಯನ್ ಆಪ್ ದಿ ಅರ್ಥ್ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.
ಇದು ವಿಶ್ವದ ಅತ್ಯಂತ ದೊಡ್ಡದಾದ ಪರಿಸರ ಪ್ರಶಸ್ತಿಯಾಗಿದ್ದು, ಅಂತಾರಾಷ್ಟ್ರೀಯ ಸೌರ ಶಕ್ತಿ ರಾಷ್ಟ್ರಗಳ ಮೈತ್ರಿಯಲ್ಲಿ ಮಾಡಿದ ಅನುಪಮ ಕೆಲಸ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಹೊಸ ಕ್ಷೇತ್ರಗಳ ಪ್ರೋತ್ಸಾಹದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ.
2022 ರೊಳಗೆ ಭಾರತವನ್ನು ಪ್ಲಾಸ್ಟಿಕ್ ಮುಕ್ತ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ನರೇಂದ್ರಮೋದಿ ಅವರ ಸಂಕಲ್ಪ ಹಾಗೂ ಪರಿಸರ ರಕ್ಷಣೆ ನಿಟ್ಟಿನಲ್ಲಿ ಮ್ಯಾಕ್ರೋನ್ ಅವರ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಮಧ್ಯೆ ಸುಸ್ಥಿರ ಇಂಧನ ಬಳಕೆಯಲ್ಲಿ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದುಕೊಂಡಿದೆ. 73 ನೇ ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ ಅಧಿವೇಶನ ಸಂದರ್ಭದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


