ಪೇಶಾವರ ಶಾಲೆ ಮೇಲಿನ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ: ಪಾಕಿಸ್ತಾನ
ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

Published On :
ವಿಶ್ವಸಂಸ್ಥೆ: ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಬೊಟ್ಟು ಮಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮ್ಮೂದ್ ಖುರೇಷಿ, ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 2014ರಲ್ಲಿ ಪೇಶಾವರದ ಶಾಲೆಯೊಂದರ ಮೇಲೆ ನಡೆದ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಖುರೇಷಿ ಗಂಭೀರ ಆರೋಪ ಮಾಡಿದರು. ಈ ಘಟನೆಯಲ್ಲಿ ಸುಮಾರು 150 ಮಕ್ಕಳು ದಾರುಣವಾಗಿ ಸಾವಿಗೀಡಾಗಿದ್ದರು. ಈ ಘಟನೆಯನ್ನು ಪಾಕ್ ಇಂದಿಗೂ ಮರೆತಿಲ್ಲ. ಈ ದಾಳಿಯಲ್ಲಿ ಭಾಗಿಯಾದ ಉಗ್ರರಿಗೆ ಭಾರತದಿಂದ ಬೆಂಬಲ ದೊರಕಿದೆ ಎಂದು ಖುರೇಷಿ ಆರೋಪಿಸಿದರು.
ಅಂತೆಯೇ ನ್ಯೂಯಾರ್ಕ್ನಲ್ಲಿ ನಡೆಯ ಬೇಕಿದ್ದ ವಿದೇಶಾಂಗ ಸಚಿವರ ಮಟ್ಟದ ಮಾತುಕತೆ ಮುರಿದುಬೀಳಲು ಭಾರತವೇ ಕಾರಣ ಎಂದು ಆರೋಪಿಸಿರುವ ಅವರು ಭಾರತ ಶಾಂತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.
'ಪಾಕಿಸ್ತಾನದೊಂದಿಗಿನ ಮಾತುಕತೆಯನ್ನು ಭಾರತ ಹಲವು ಭಾರಿ ಹಿಂತೆಗೆದುಕೊಂಡಿದ್ದು, ಶಾಂತಿ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಭಾರತ ಆಯ್ದುಕೊಂಡಿದೆ. ಕಾಶ್ಮೀರಿ ಕಾರ್ಯಕರ್ತನ ಹೆಸರಲ್ಲಿ ಅಂಚೆ ಚೀಟಿ ಬಿಡುಗಡೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ನೆಪವೊಡ್ಡಿ ಭಾರತ ಪಾಕ್ನೊಂದಿಗಿನ ಮಾತುಕತೆಯನ್ನು ಮುರಿದುಕೊಳ್ಳುತ್ತಿದೆ ಎಂದು ಖುರೇಷಿ ಆರೋಪಿಸಿದರು.
ಕಾಶ್ಮೀರ ವಿವಾದ ಬಗೆಹರಿಯುವವರೆಗೂ ದಕ್ಷಿಣ ಏಷ್ಯಾ ಭಾಗದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸದು. ಈ ಸಮಸ್ಯೆಯು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಆಧಾರದ ಮೇಲೆ ಹಾಗೂ ಕಾಶ್ಮೀರಿಗಳ ಇಷ್ಟದಂತೆ ಬಗೆಹರಿಯಬೇಕು. ಕಾಶ್ಮೀರ ವಿವಾದ ಬಗೆಹರಿಯದೇ ಇರುವುದು ಮಾನವೀಯತೆಯ ಆತ್ಮಸಾಕ್ಷಿಯ ಮೇಲಿನ ಹೊಡೆತವಾಗಿದ್ದು, ಶಾಂತಿ ಸಾಧಿಸುವುದರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಸಾರ್ವಭೌಮ ಸಮಾನತೆ ಮತ್ತು ಪರಸ್ಪರ ಗೌರವ ಆಧಾರದ ಮೇಲೆ ಇಸ್ಲಾಮಾಬಾದ್, ನವದೆಹಲಿಯೊಂದಿಗೆ ಸಂಬಂಧ ಬೆಳೆಸಬೇಕೆಂದುಕೊಂಡಿದೆ. ಗಂಭೀರ ಹಾಗೂ ಸಮಗ್ರವಾದ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದನ್ನು ನಾವು ಎದರು ನೋಡುತ್ತಿದ್ದೇವೆ ಎಂದು ಖುರೇಷಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನವಿಶ್ವಸಂಸ್ಥೆUnited Nationsನ್ಯೂಯಾರ್ಕ್NewyorkPeshawar school attackಪೇಶಾವರ ಶಾಲೆ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


