ಲಂಡನ್ ನಲ್ಲಿದ್ದ ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್ ಬಂಧನ
ಸರ್ಕಾರಗಳ ಒಳಗಿನ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿ ವಿಶ್ವಾದ್ಯಂತ ಸುದ್ದಿಯಾಗಿದ್ದ ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್ ನ್ನು 7 ವರ್ಷಗಳ ಬಳಿಕ ಬಂಧಿಸಲಾಗಿದೆ.

Published On :
ಲಂಡನ್: ಸರ್ಕಾರಗಳ ಒಳಗಿನ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿ ವಿಶ್ವಾದ್ಯಂತ ಸುದ್ದಿಯಾಗಿದ್ದ ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್ ನ್ನು 7 ವರ್ಷಗಳ ಬಳಿಕ ಬಂಧಿಸಲಾಗಿದೆ.
ಈಕ್ವೆಡೇರಿಯನ್ ದೂತಾವಾಸ ಕಚೇರಿಯಿಂದ ಬ್ರಿಟನ್ ಪೊಲೀಸರು ಜೂಲಿಯನ್ ಅಸಾಂಜ್ ನ್ನು ಬಂಧಿಸಿದ್ದಾರೆ. ಸ್ವೀಡನ್ ಗೆ ಗಡಿಪಾರಾಗುವುದರಿಂದ ತಪ್ಪಿಸಿಕೊಳ್ಳಲು ಜೂಲಿಯನ್ ಅಸಾಂಜ್ 2012 ರಿಂದ ಇದೇ ಕಚೇರಿಯಲ್ಲಿ ರಕ್ಷಣೆ ಪಡೆದಿದ್ದರು.
ಜೂಲಿಯನ್ ಅಸಾಂಜ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿತ್ತು. ಈ ಸಂಬಂಧದ ತನಿಖೆಗಾಗಿ ಅವರನ್ನು ಸ್ವೀಡನ್ ಗೆ ಗಡಿಪಾರು ಮಾಡುವಂತೆ ಆಗ್ರಹಿಸಲಾಗಿತ್ತು.
ಈಕ್ವೆಡಾರ್ ನ ಸರ್ಕಾರ ಅಸಾಂಜ್ ಗೆ ನೀಡಿದ್ದ ಆಶ್ರಯವನ್ನು ಹಿಂಪಡೆದಿದ್ದು, ಈ ಬೆನ್ನಲ್ಲೆ ಬ್ರಿಟನ್ ಪೊಲೀಸರು ಅಸಾಂಜ್ ನ್ನು ವಶಕ್ಕೆ ಪಡೆದಿದ್ದಾರೆ. ವಿಕಿಲೀಕ್ಸ್ ನ ಟ್ವಿಟರ್ ಖಾತೆ ಸಹ ಅಸಾಂಜ್ ಬಂಧನವನ್ನು ಸ್ಪಷ್ಟಪಡಿಸಿದೆ.
ವಿಶ್ವದ ದೊಡ್ಡಣ್ಣ ಅಮೆರಿಕ ಕುರಿತಾಗಿಯೂ ಅನೇಕ ಸ್ಫೋಟಕ ಮಾಹಿತಿಗಳನ್ನು ವಿಕಿಲೀಕ್ಸ್ ಮೂಲಕ ಬಹಿರಂಗಪಡಿಸಿದ್ದ ಅಸಾಂಜ್ ಅಮೆರಿಕದಿಂದಲೂ ಬಂಧನ ಭೀತಿ ಎದುರಿಸುತ್ತಿದ್ದಾರೆ. ಅಸಾಂಜ್ ಅವರ ಸಾಹಸಕ್ಕಾಗಿ 2011 ರಲ್ಲಿ ಶಾಂತಿ ಪ್ರತಿಷ್ಠಾನದ ಪ್ರತಿಷ್ಠಿತ ಪದಕ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


