ವಿದೇಶ

ಚೀನಾದಿಂದ ಪಡೆದ ಸಾಲದ ವಿವರ ಸಲ್ಲಿಸಿ: ಪಾಕಿಸ್ತಾನಕ್ಕೆ ಐಎಂಎಫ್

ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ (ಐಎಂಎಫ್) ಪಾಕಿಸ್ತಾನಕ್ಕೆ ಆರ್ಥಿಕ ಸಹಕಾರ ನೀಡುವುದರ ಬಗ್ಗೆ ಯೋಚನೆ ಮಾಡುತ್ತಿದ್ದು, ಚೀನಾದಿಂದ ತೆಗೆದುಕೊಂಡಿರುವ ಸಾಲದ ಬಗ್ಗೆ ಮಾಹಿತಿ ನೀಡುವಂತೆ ಪಾಕ್ ಗೆ

ಚೀನಾದಿಂದ ಪಡೆದ ಸಾಲದ ವಿವರ ಸಲ್ಲಿಸಿ: ಪಾಕಿಸ್ತಾನಕ್ಕೆ ಐಎಂಎಫ್
ಚೀನಾದಿಂದ ಪಡೆದ ಸಾಲದ ವಿವರ ಸಲ್ಲಿಸಿ: ಪಾಕಿಸ್ತಾನಕ್ಕೆ ಐಎಂಎಫ್
Published On :
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ (ಐಎಂಎಫ್) ಪಾಕಿಸ್ತಾನಕ್ಕೆ ಆರ್ಥಿಕ ಸಹಕಾರ ನೀಡುವುದರ ಬಗ್ಗೆ ಯೋಚನೆ ಮಾಡುತ್ತಿದ್ದು, ಚೀನಾದಿಂದ ತೆಗೆದುಕೊಂಡಿರುವ ಸಾಲದ ಬಗ್ಗೆ ಮಾಹಿತಿ ನೀಡುವಂತೆ ಪಾಕ್ ಗೆ ಸೂಚನೆ ನೀಡಿದೆ. 
ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿಯ ಪ್ರಕಾರ ಐಎಂಎಫ್ ತನ್ನ ಇತ್ತೀಚಿನ ಸಭೆಯಲ್ಲಿ, ಚೀನಾ ಪಾಕಿಸ್ತಾನಕ್ಕೆ ನೀಡುತ್ತಿರುವ ಆರ್ಥಿಕ ಸಹಕಾರದ ಬಗ್ಗೆ ಕಾಳಜಿ ಹೊಂದಿರುವುದಾಗಿ ಹೇಳಿದೆ.
ಪಾಕಿಸ್ತಾನದ ಹಣಕಾಸು ಸಚಿವ ಅಸಾದ್ ಉಮರ್ ಈ ಬಗ್ಗೆ ಮಾತನಾಡಿದ್ದು, ಐಎಂಎಫ್ ಹಾಗೂ ಪಾಕಿಸ್ತಾನ ಮುಂದಿನ ದಿನಗಳಲ್ಲಿ ಒಮ್ಮತಕ್ಕೆ ಬರುವುದಾಗಿ ಹೇಳಿದ್ದಾರೆ. 
ಕಳೆದ ಕೆಲವು ವರ್ಷಗಳಲ್ಲಿ ಪಾಕಿಸ್ತಾನ ಹಾಗೂ ಚೀನಾ ಸುಮಾರು 6.2 ಬಿಲಿಯನ್ ಡಾಲರ್ ಮೊತ್ತದ 6 ಕ್ಕೂ ಹೆಚ್ಚು ಯೋಜನೆಗಳ ಒಪ್ಪಂದಕ್ಕೆ ಸಹಿ ಹಾಕಿವೆ. ಇದಲ್ಲದೇ ಚೀನಾ ಪಾಕಿಸ್ತಾನಕ್ಕೆ 6.5 ಬಿಲಿಯನ್ ಡಾಲರ್ ಮೊತ್ತದ ವಾಣಿಜ್ಯ ಸಾಲವನ್ನೂ ನೀಡಿದೆ. ಈ ಮಧ್ಯೆ ಅಮೆರಿಕ ಸಹ ಪಾಕಿಸ್ತಾನಕ್ಕೆ ಆರ್ಥಿಕ ನೆರವನ್ನು ಕಡಿತಗೊಳಿಸಿತ್ತು. ಕಳೆದ ವರ್ಷ ಅಕ್ಟೋಬರ್ ನಲ್ಲಿ ಪಾಕಿಸ್ತಾನ ಮತ್ತಷ್ಟು ಆರ್ಥಿಕ ಸಹಕಾರ ಕೋರಿ ಐಎಂಎಫ್ ಗೆ ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.