ವಿದೇಶ

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮಂಗಳೂರು ಮಹಿಳೆ ಸೇರಿ 3 ಭಾರತೀಯರ ಸಾವು!

ಶ್ರೀಲಂಕಾದಲ್ಲಿ ನಡೆದ ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದಾರೆ.

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮಂಗಳೂರು ಮಹಿಳೆ ಸೇರಿ 3 ಭಾರತೀಯರ ಸಾವು!
ಸಂಗ್ರಹ ಚಿತ್ರ
Published On :
ಮಂಗಳೂರು/ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದಾರೆ. 
ಬೈಕಂಪಾಡಿ ಮೂಲದ ಕುಕ್ಕಾಡಿಯ ರಝೀನಾ ಖಾದರ್ ಕುಕ್ಕಾಡಿ ಮೃತ ದುರ್ದೈವಿ. ಇನ್ನು ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹೇಳಿದ್ದಾರೆ. 
ಕ್ರಿಶ್ಚಿಯನ್ನರ  ಪವಿತ್ರ ದಿನವಾದ ಇಂದು ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ರಕ್ತದೋಕುಳಿ ಹರಿದಿದೆ.ಎಂಟು ಕಡೆ ನಡೆದ ಆತ್ಮಾಹುತಿ ಬಾಂಬರ್ ದಾಳಿಯಿಂದಾಗಿ  35 ವಿದೇಶಿಯರು ಸೇರಿದಂತೆ 207 ಜನರು ಮೃತಪಟ್ಟಿದ್ದಾರೆ. 400 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ನ್ಯೂಸ್ ಏಜೆನ್ಸಿ ಎಎಫ್ ಪಿ ವರದಿ ಮಾಡಿದೆ.
ಬಹುತೇಕ ಆತ್ಮಾಹುತಿ ಬಾಂಬರ್ ದಾಳಿಯಾಗಿದ್ದು, ಈ ದಾಳಿಯ ಹಿಂದೆ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗಿದ್ದು, ಏಳು ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ರಕ್ಷಣಾ ಸಚಿವ ರುವಾನ್ ವಿಜೆವರ್ದನೆ  ತಿಳಿಸಿದ್ದಾರೆ.
ಕೊಲಂಬೊದಲ್ಲಿನ ಮೂರು ಹೋಟೆಲ್ ಹಾಗೂ ಚರ್ಚ್ ನಲ್ಲಿ ಮೊದಲ ಬಾಂಬ್ ಸ್ಟೋಟಿಸಿದ್ದರೆ, ಕೊಲಂಬೊ ಹೊರವಲಯದಲ್ಲಿನ ಇನ್ನಿತರ ಎರಡು ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದಾಗ ಬಾಂಬ್ ಸ್ಟೋಟಿಸಿದೆ. ತದನಂತರ ದಾಹಿವಾಲಾದಲ್ಲಿನ ರಾಷ್ಟ್ರೀಯ ಪ್ರಾಣಿ ಸಂಗ್ರಹಾಲಯದಲ್ಲಿನ ಎದುರುಗಡೆಯ ಹೋಟೆಲ್ ನಲ್ಲಿ ಮತ್ತೊಂದು ಬಾಂಬ್ ಸ್ಟೋಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.