ಚೀನಾ ನೆಲದಲ್ಲೇ ನಿಂತು, ಚೀನಾಗೇ ಎಚ್ಚರಿಕೆ ನೀಡಿದ ಭಾರತ!
ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಚೀನಾಗೆ ಭೇಟಿ ನೀಡಿದ್ದು, ಭಯೋತ್ಪಾದನೆ ವಿಷಯವಾಗಿ ಭಾರತ ನೆರೆ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದೆ.

Published On :
ಬೀಜಿಂಗ್: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಚೀನಾಗೆ ಭೇಟಿ ನೀಡಿದ್ದು, ಭಯೋತ್ಪಾದನೆ ವಿಷಯವಾಗಿ ಭಾರತ ನೆರೆ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದೆ.
ಚೀನಾಗೆ ಭೇಟಿ ನೀಡಿರುವ ವಿಜಯ್ ಗೋಖಲೆ, ಅಲ್ಲಿನ ರಾಜ್ಯ ಕೌನ್ಸಿಲರ್ ವಾಂಗ್ ಯಿ ಅವರನ್ನು ಭೇಟಿ ಮಾಡಿದ್ದು, ಮಸೂದ್ ಅಜರ್ ವಿಷಯ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪುಲ್ವಾಮ ದಾಳಿಯೂ ಸೇರಿದಂತೆ ಭಾರತದ ಮೇಲೆ ಹಲವು ಭಯೋತ್ಪಾದಕ ಕೃತ್ಯಗಳನ್ನು ಎಸಗಿರುವ ಪಾಕಿಸ್ತಾನದ ಉಗ್ರ ಮಸೂದ್ ಅಜರ್ ಗೆ ವಿಶ್ವಸಂಸ್ಥೆ ನಿಷೇಧ ವಿಧಿಸಲು ಭಾರತ ಪ್ರಸ್ತಾವನೆ ಮಂಡಿಸಿತ್ತು. ಫ್ರಾನ್ಸ್, ಬ್ರಿಟನ್ ಸೇರಿದಂತೆ ವಿಶ್ವಸಂಸ್ತೆ ಭದ್ರತಾ ಮಂಡಳಿಯ ಬಹುತೇಕ ರಾಷ್ಟ್ರಗಳು ಭಾರತಕ್ಕೆ ಬೆಂಬಲ ನೀಡಿತ್ತಾದರೂ ಚೀನಾ ಮಸೂದ್ ಅಜರ್ ನಿಷೇಧಕ್ಕೆ ಅಡ್ಡಗಾಲು ಹಾಕಿತ್ತು.
ಈಗ ಚೀನಾ ಭೇಟಿಯಲ್ಲಿರುವ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಮಸೂದ್ ಅಜರ್ ವಿಷಯವನ್ನು ಪ್ರಸ್ತಾಪಿಸಲಿದ್ದು, ಮಸೂದ್ ಅಜರ್ ನಿಷೇಧಕ್ಕೆ ಅಡ್ಡಗಾಲು ಹಾಕದಂತೆ ಚೀನಾ ಜೊತೆ ಮಾತುಕತೆ ನಡೆಸಲಿದ್ದಾರೆ.
ಈ ನಡುವೆಯೇ ವಿಜಯ್ ಗೋಖಲೆ ಮಾತನಾಡಿದ್ದು, ಚೀನಾ ನಮ್ಮ ನಮಗೆ ಸಂಬಂಧಪಟ್ಟ ವಿಷಯಗಳಿಗೂ ಸೂಕ್ಷ್ಮವಾಗಿ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಪರಸ್ಪರ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಚೀನಾ ಅಧಿಕಾರಿಗಳೊಂದಿಗೆ ನಾವು ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದು ಚೀನಾದ ವಿದೇಶಾಂಗ ಇಲಾಖೆಯ ಉಪ ಸಚಿವರ ಭೇಟಿ ನಂತರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


