ಟೆಕ್ಸಾಸ್ ನಲ್ಲಿ ಗುಂಡಿನ ದಾಳಿ: 20 ಸಾವು, 26 ಕ್ಕೂ ಹೆಚ್ಚು ಜನರಿಗೆ ಗಾಯ!
ಅಮೆರಿಕದಲ್ಲಿ ಗುಂಡಿನ ದಾಳಿ ನಡೆದಿದ್ದು, 20 ಜನರು ಸಾವನ್ನಪ್ಪಿದ್ದು, 26 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Published On :
ಟೆಕ್ಸಾಸ್: ಅಮೆರಿಕದಲ್ಲಿ ಗುಂಡಿನ ದಾಳಿ ನಡೆದಿದ್ದು, 20 ಜನರು ಸಾವನ್ನಪ್ಪಿದ್ದು, 26 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಟೆಕ್ಸಾಸ್ ನ ಜನನಿಬಿಡ ಶಾಪಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದ್ವೇಷದಿಂದ ನಡೆದಿರುವ ಕೃತ್ಯ ಎಂದು ಪೊಲೀಸರು ಶಂಕಿಸಿದ್ದಾರೆ.
ಗುಂಡಿನ ದಾಳಿ ನಡೆಸಿರುವ ಗನ್ ಮ್ಯಾನ್ ನ್ನು 21 ವರ್ಷದ ಪ್ಯಾಟ್ರಿಕ್ ಕ್ರೂಸಿಯಸ್ ಎಂದು ಗುರುತಿಸಲಾಗಿದೆ.
ಎಲ್ ಪಾಸೊ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಕೃತ್ಯ ಎಸಗಿರುವ ವ್ಯಕ್ತಿ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದು, ಈ ಘಟನೆಗೂ ಫೇಸ್ ಬುಕ್ ಪೋಸ್ಟ್ ಗೂ ಸಂಬಂಧವಿದೆಯೇ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ 26 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


