ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಯುದ್ಧಕ್ಕೂ ಸಿದ್ಧ: ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರದ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರದ ವಿರುದ್ಧ ಯುದ್ಧ ಸಾರಬೇಕಾದೀತು ಎಂದೂ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರದ ವಿರುದ್ಧ ಯುದ್ಧ ಸಾರಬೇಕಾದೀತು ಎಂದೂ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.
ಖಾನ್ ತಮ್ಮ ಇತ್ತೀಚಿನ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತ, ದೇಶದ ಮುಸ್ಲಿಮರನ್ನು ಬೀದಿಯಲ್ಲಿ ಹತ್ಯೆ ಮಾಡುತ್ತಿರುವುದರ ಬಗ್ಗೆ ಪ್ರಸ್ತಾಪ ಮಾಡಿ, ಜೊತೆಗೆ ಕಾಶ್ಮೀರ ಕಣಿವೆಯ ಪ್ರಸ್ತುತ ಬೆಳವಣಿಗೆಗಳು ಆತಂಕಕಾರಿ ಎಂದು ಹೇಳಿದ್ದರು.
ಕಾಶ್ಮಿರದ ಸ್ವಾತಂತ್ರ್ಯಕ್ಕಾಗಿ ಅಲ್ಲಿನ ಜನರ ಬದುಕಿಗಾಗಿ, ಪಾಕ್ ಸೇನೆ ಮತ್ತು ಜನತೆ ಎಲ್ಲದಕ್ಕೂ ಸಿದ್ದರಾಗಿದ್ದಾರೆ ಎಂದು ಅವರು ಹೇಳಿದರು. ಭಾರತ ಕಾರ್ಯತಂತ್ರದ ಪ್ರಮಾದ ಮಾಡಿದೆ, ಪ್ರಧಾನಿ ನರೇಂದ್ರ ಮೋದಿ ತಮ್ಮ ಅಂತಿಮ ಆಟ ಆಡುತ್ತಿದ್ದಾರೆ ಆದರೆ ಅದು ಭಾರತಕ್ಕೆ ತುಂಬಾ ದುಬಾರಿಯಾಗಲಿದೆ ಎಂದು ಹೇಳಿದರು.
ಕಾಶ್ಮೀರ ಅಂತಾರಾಷ್ಟ್ರೀಯ ಸಮುದಾಯದ ರಾಡಾರ್‌ನಲ್ಲಿ ಇರಲಿಲ್ಲ, ಆದರೆ ಜಾಗತಿಕ ನಿರೂಪಣೆಯಲ್ಲಿ ಕಾಶ್ಮೀರ ವಿಷಯ ಇರುವಾಗ ನಾನು ಕಾಶ್ಮೀರದ ರಾಯಭಾರಿಯಾಗುವುದಾಗಿ ಪ್ರತಿಜ್ಞೆ ಮಾಡುವುದಾಗಿಯೂ ಇಮ್ರಾನ್ ಖಾನ್ ಹೇಳಿದ್ದಾರೆ. ಈಗ, ನಾನು ಬ್ರಾಂಡ್ ಅಂಬಾಸಿಡರ್ ಆಗಿ ಕಾಶ್ಮೀರ ಸಮಸ್ಯೆಯನ್ನು ಜಗತ್ತಿನ ಎಲ್ಲಾ ವೇದಿಕೆಗಳಿಗೆ ಕೊಂಡೊಯ್ಯುತ್ತೇನೆ ಎಂದು ಖಾನ್ ಹೇಳಿದರು.
ಭಾರತದಲ್ಲಿ ವಾಸಿಸುತ್ತಿರುವ ಸುಮಾರು 18 ಕೋಟಿ ಮುಸ್ಲಿಮರಿಗೆ ಆಗುವ ಅಪಾಯವನ್ನು ಉಲ್ಲೇಖಿಸಿ ಭಾರತದಲ್ಲಿನ ಕಾಶ್ಮೀರಿ ರಾಜಕಾರಣಿಗಳು ಇಂದು ಎರಡು ರಾಷ್ಟ್ರ ಸಿದ್ಧಾಂತವನ್ನು ಅನುಮೋದಿಸುತ್ತಿದ್ದಾರೆ ಎಂದೂ ಇಮ್ರಾನ್ ಖಾನ್ ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


