ಭಾರತದ ಯುದ್ದವಿಮಾನ ಹೊಡೆದುರುಳಿಸಿದ ಇಬ್ಬರು ಪೈಲಟ್ ಗಳಿಗೆ ಪಾಕ್ ಅತ್ಯುನ್ನತ ಸೇನಾ ಪ್ರಶಸ್ತಿ
ಫೆಬ್ರವರಿ ತಿಂಗಳಲ್ಲಿ ನಡೆದ ಭಾರತದೊಂದಿಗಿನ ಬಾಹ್ಯಾಕಾಶ ಕಾದಾಟದಲ್ಲಿ ಭಾರತದ ಯುದ್ದ ವಿಮಾನ ಹೊಡೆದುರುಳಿಸಿದ್ದ ಪಾಕಿಸ್ತಾನದ ವಾಯುಪಡೆಯ ಇಬ್ಬರು ಪೈಲಟ್ ಗಳಿಗೆ ಅತ್ಯುನ್ನತ ಸೇನಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ

ಇಸ್ಲಾಮಾಬಾದ್ : ಫೆಬ್ರವರಿ ತಿಂಗಳಲ್ಲಿ ನಡೆದ ಭಾರತದೊಂದಿಗಿನ ಬಾಹ್ಯಾಕಾಶ ಕಾದಾಟದಲ್ಲಿ ಭಾರತದ ಯುದ್ದ ವಿಮಾನ ಹೊಡೆದುರುಳಿಸಿದ್ದ ಪಾಕಿಸ್ತಾನದ ವಾಯುಪಡೆಯ ಇಬ್ಬರು ಪೈಲಟ್ ಗಳಿಗೆ ಅತ್ಯುನ್ನತ ಸೇನಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಫೆಬ್ರವರಿ 27 ರಂದು ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ತಮಾನ್ ಚಲಾಯಿಸುತ್ತಿದ್ದ ಯುದ್ದ ವಿಮಾನವನ್ನು ಹೊಡೆದುರುಳಿಸಿದ್ದ ಪಾಕಿಸ್ತಾನದ ವಿಂಗ್ ಕಮಾಂಡರ್ ಮೊಹಮ್ಮದ್ ನೌಮನ್ ಆಲಿಗೆ ಸಿತಾರ್-ಇ- ಜುರಾತ್ ಹಾಗೂ ಸ್ಕ್ವಾಡ್ರನ್ ಮುಖಂಡ ಹಸನ್ ಮೊಹಮ್ಮದ್ ಸಿದಿಕ್ಕಿಗೆ ತಂಘಾ- ಇ- ಸುಜಾತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಮುಂದಿನ ವರ್ಷ ಮಾರ್ಚ್ 23ರಂದು ನಡೆಯಲಿರುವ ಪಾಕಿಸ್ತಾನದ ದಿನದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


