ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಕಾಶ್ಮೀರ ಕುರಿತು ರಹಸ್ಯ ಸಭೆ
ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ.

ವಿಶ್ವಸಂಸ್ಥೆ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ.
ಜಮ್ಮು ಮತ್ತು ಕಾಶ್ಮೀರ ಕುರಿತು ಆಗಸ್ಟ್ 16ರಂದು ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಲಾಗುವುದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಜೋನ್ನಾ ವ್ರೋನೆಕ್ಕಾ ಅವರು ಬುಧವಾರ ಹೇಳಿರುವುದಾಗಿ ವರದಿಗಳು ತಿಳಿಸಿವೆ.
ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಹೇಳಿದೆ ಬೆನ್ನಲ್ಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಸಲಾಗುತ್ತಿದೆ.
ಅಲ್ಲದೆ ಪಾಕಿಸ್ತಾನ ಕಾಶ್ಮೀರದ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತಾಪಿಸುವಂತೆ ಮಿತ್ರ ರಾಷ್ಟ್ರ ಚೀನಾಕ್ಕೆ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಅಧ್ಯಕ್ಷ ರಾಷ್ಟ್ರ ಪೋಲೆಂಡ್ಗೆ ಪತ್ರ ಬರೆದಿರುವ ಚೀನಾ, ಕಾಶ್ಮೀರ ಕುರಿತು ಗೌಪ್ಯ ಸಭೆ ಆಯೋಜಿಸುವಂತೆ ಆಗ್ರಹಿಸಿದೆ.
ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ವಿಭಜಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದೆ. ಇದಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭಾರತದ ಕ್ರಮ ಕಾನೂನು ಬಾಹಿರ ಮತ್ತು ವಿಶ್ವಸಂಸ್ಥೆಯ ನಿರ್ಣಯಗಳ ಉಲ್ಲಂಘನೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


