ಕಾಶ್ಮೀರ ವಿಚಾರ ಸಂಬಂಧ ಮತ್ತೆ ಮಧ್ಯಸ್ಥಿಕೆ ಮಾತನಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್!
ಭಾರತ ಮತ್ತು ಪಾಕಿಸ್ತಾನದ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳೂ ಒಪ್ಪಿದರೆ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಮತ್ತೆ ಕಾಶ್ಮೀರ ವಿಚಾರವನ್ನು ಕೆದಕಿದ್ದಾರೆ.

ನನ್ನಿಂದ ಏನು ಸಾಧ್ಯವೋ ಅದನ್ನು ಪ್ರಮಾಣಿಕವಾಗಿ ಉತ್ತಮವಾಗಿ ಮಾಡುತ್ತೇನೆ
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳೂ ಒಪ್ಪಿದರೆ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಮತ್ತೆ ಕಾಶ್ಮೀರ ವಿಚಾರವನ್ನು ಕೆದಕಿದ್ದಾರೆ.
ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಾವು ಮಾತನಾಡಿದ್ದು, ಈ ವೇಳೆ ಕಾಶ್ಮೀರ ವಿಚಾರವಾದಿ ಸುದೀರ್ಘವಾಗಿ ಚರ್ಚೆ ನಡೆಸಿದ್ದೇನೆ. ಅಂತೆಯೇ ಕಣಿವೆ ರಾಜ್ಯದಲ್ಲಿ ಉಂಟಾಗಿರುವ ಪ್ರಕ್ಷುಬ್ದತೆಯನ್ನು ಶಮನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಮೋದಿಗೆ ಹೇಳಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.
ಅಂತೆಯೇ ಕಾಶ್ಮೀರ ಅತ್ಯಂತ ಸೂಕ್ಷ್ಮ ಮತ್ತು ಕಠಿಣ ಪ್ರದೇಶವಾಗಿದ್ದು, ಅಲ್ಲಿ ಮುಸ್ಲಿಮರು ಮತ್ತು ಹಿಂದೂಗಳು ವಾಸಿಸುತ್ತಿದ್ದು, ಅವರು ಸಾಮರಸ್ಯಕ್ಕೆ ಅನುವು ಮಾಡಿಕೊಡಬೇಕು. ಇದಕ್ಕಾಗಿ ನನ್ನಿಂದ ಏನು ಸಾಧ್ಯವೋ ಅದನ್ನು ಪ್ರಮಾಣಿಕವಾಗಿ ಉತ್ತಮವಾಗಿ ಮಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಇನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ಸೋಮವಾರ ದೂರವಾಣಿ ಸಂಭಾಷಣೆ ನಡೆಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಾಶ್ಮೀರದ ವಿಚಾರವಾಗಿ ಎರಡೂ ದೇಶಗಳ ನಡುವೆ ಮನೆ ಮಾಡಿರುವ ದ್ವೇಷದ ವಾತಾವರಣ ನಿವಾರಣೆಯಾಗಬೇಕಾದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ‘ವಾಣಿಜ್ಯ ವ್ಯವಹಾರ, ಕಾರ್ಯತಂತ್ರ ಸಹಭಾಗಿತ್ವದ ಕುರಿತು ನಾನು ಇಂದು ನನ್ನ ಗೆಳೆಯರಾದ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೆ ಸಮಾಲೋಚನೆ ನಡೆಸಿದೆ. ಎಲ್ಲಕ್ಕೂ ಮುಖ್ಯವಾಗಿ, ಕಾಶ್ಮೀರದ ವಿಚಾರವಾಗಿ ಆ ಎರಡೂ ದೇಶಗಳ ನಡುವೆ ಮನೆ ಮಾಡಿರುವ ಆತಂಕ, ದ್ವೇಷದ ವಾತಾವರಣ ನಿವಾರಣೆಗೊಳ್ಳಬೇಕಾದ ಅಗತ್ಯವನ್ನು ತಿಳಿಸಿದ್ದೇನೆ. ಕಠಿಣ ಸನ್ನಿವೇಶದಲ್ಲಿ ಉತ್ತಮ ಸಮಾಲೋಚನೆ ನಡೆಯಿತು,’ ಎಂದು ಅವರು ಹೇಳಿಕೊಂಡಿದ್ದಾರೆ.
Related Article
ಕಾಶ್ಮೀರ ವಿಷಯದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಲು ಪಾಕಿಸ್ತಾನ ಸಿದ್ಧತೆ!
ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳಿ; ಇಮ್ರಾನ್ ಖಾನ್ ಗೆ ಡೊನಾಲ್ಡ್ ಟ್ರಂಪ್ ಸಲಹೆ
'ಮೋದಿಯ ಹಿಂದೂಸ್ಥಾನದಲ್ಲಿ ದೋವಲ್ ಸಿದ್ಧಾಂತದೊಂದಿಗೆ ವ್ಯವಹರಿಸುತ್ತಿದ್ದೇವೆ': ಪಾಕ್ ಸಚಿವ!
ಕಾಶ್ಮೀರ ಪರಿಸ್ಥಿತಿ: 'ನಿಮ್ಮ ಸಹವಾಸ ಬೇಡ' ಇಮ್ರಾನ್ ಖಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ
ಅಣುಬಾಂಬ್ ಬಳಕೆ ಕುರಿತು ಭಾರತದ ಹೇಳಿಕೆ ಯುದ್ಧೋತ್ಸಾಹವನ್ನು ತೋರಿಸುತ್ತದೆ: ಪಾಕ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


