ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ – ಅಜಿತ್ ದೋವಲ್ ಮಾತುಕತೆ
ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಮಾಸ್ಕೋ: ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಿನ ತಿಂಗಳು ವ್ಲಾಡಿವೋಸ್ಟಾಕ್ ನಲ್ಲಿ ನಡೆಯಲಿರುವ ಪೂರ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಿರುವ ಹಿನ್ನೆಲೆಯಲ್ಲಿ ಅಲ್ಲಿನ ಸಿದ್ಧತೆಗಳು ಮೊದಲಾದವುಗಳ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ರಷ್ಯಾದೊಂದಿಗೆ ಮಾತುಕತೆ ನಡೆಸಿದ್ದಾರೆ.
ರಷ್ಯಾದ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರ ಆಹ್ವಾನದ ಮೇರೆಗೆ ಅಲ್ಲಿಗೆ ದೋವೆಲ್ ಭೇಟಿ ನೀಡಿದ್ದು ಉಭಯ ದೇಶಗಳು ಭಯೋತ್ಪಾದನೆ ನಿಗ್ರಹಕ್ಕೆ ಸಹಕಾರ ವರ್ಧನೆಯನ್ನು ಪುನರುಚ್ಚರಿಸಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.
ಅಜಿತ್ ದೋವೆಲ್ ಮತ್ತು ನಿಕೋಲಾಯ್ ಪಟ್ರುಶೆವ್ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಚಾರಗಳ ಕುರಿತಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಉಭಯ ದೇಶಗಳ ನಡುವಣ ವಿಶೇಷ ತಂತ್ರಗಾರಿಕಾ ಪಾಲುದಾರಿಕೆಯ ವಿಶ್ವಾಸ ಕುರಿತಂತೆ ಇಬ್ಬರು ನಾಯಕರು ಚರ್ಚೆ ನಡೆಸಿದರು ಎಂದು ಹೇಳಿಕೆ ತಿಳಿಸಿದೆ.
ಇನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿ ರದ್ದುಗೊಂಡ ಬೆನ್ನಲ್ಲೇ, ಕಣಿವೆಯ ಭದ್ರತಾ ಉಸ್ತುವಾರಿ ಹೊತ್ತಿದ್ದ ಅಜಿತ್ ಧೋವಲ್, ಇದೀಗ ರಷ್ಯಾದ ಭದ್ರತಾ ಸಲಹೆಗಾರ ನಿಕೋಲಾಯ್ ಪತ್ರುಸೇವ್ ಅವರನ್ನು ಅಜಿತ್ ಧೋವಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪೂರ್ವ ಆರ್ಥಿಕ ವೇದಿಕೆ(EEF) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇದೇ ಸೆಪ್ಟೆಂಬರ್’ನಲ್ಲಿ ಪ್ರಧಾನಿ ಮೋದಿ ರಷ್ಯಾದ ವ್ಲಾದಿವೋಸ್ಟೋಕ್’ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಜಿತ್ ಧೋವಲ್ ರಷ್ಯಾ ಪ್ರವಾಸದಲ್ಲಿದ್ದು, ಉಭಯ ರಾಷ್ಟ್ರಗಳ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


