2021ರ ವೇಳೆಗೆ ಹವಾಮಾನ ವೈಪರೀತ್ಯ ತಡೆಯುವ ಗುರಿ ಸಾಧಿಸುತ್ತೇವೆ: ಫ್ರಾನ್ಸ್ ನಲ್ಲಿ ಪ್ರಧಾನಿ ಮೋದಿ
ನಾವು 2021ರ ವೇಳೆಗೆ ಹವಾಮಾನ ವೈಪರೀತ್ಯವನ್ನು ತಡೆಯುವ ಗುರಿ ಸಾಧಿಸುತ್ತೇವೆ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ಯಾರಿಸ್: ನಾವು 2021ರ ವೇಳೆಗೆ ಹವಾಮಾನ ವೈಪರೀತ್ಯವನ್ನು ತಡೆಯುವ ಗುರಿ ಸಾಧಿಸುತ್ತೇವೆ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಜಿ-7 ಶೃಂಗಸಭೆಯಲ್ಲಿ ಭಾಗಿಯಾಗಲು ಫ್ರಾನ್ಸ್ ಗೆ ತೆರಳಿರುವ ಪ್ರಧಾನಿ ಮೋದಿ ಅವರು ಇಂದು ಪ್ಯಾರಿಸ್‍ನ ಯುನೆಸ್ಕೋ ಕಚೇರಿಯಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿ, ನಾನು ಫುಟ್ಬಾಲ್ ಪ್ರಿಯರ ರಾಷ್ಟ್ರಕ್ಕೆ ಬಂದಿದ್ದೇನೆ. ಫುಟ್ಬಾಲ್‍ನಲ್ಲಿ ಪ್ರತಿ ಗೋಲ್‍ನ ಮಹತ್ವ ನಿಮಗೆ ಗೊತ್ತಿದೆ. ಅದರಂತೆ ಅಸಾಧ್ಯವೆಂದು ಪರಿಗಣಿಸಲಾಗಿದ್ದ ಗುರಿಗಳನ್ನು ಈಡೇರಿಸಲು ನಮ್ಮ ಸರ್ಕಾರ ಮುಂದಾಗಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ 75 ದಿನಗಳಲ್ಲಿ ನಾವು ಅನೇಕ ಧೃಡ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು.
ಭಾರತವು ಈಗ ಅಭಿವೃದ್ಧಿಯ ಕಡೆಗೆ ಸಾಗುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸಿಕ್ಕ ಜನಾದೇಶವು ಕೇವಲ ಸರ್ಕಾರ ರಚನೆಗಾಗಿ ಅಲ್ಲ. ಅದು ಭವ್ಯ ಭಾರತ ನಿರ್ಮಾಣಕ್ಕೆ ಸಿಕ್ಕ ಉತ್ತಮ ಅವಕಾಶವಾಗಿದೆ ಎಂದು ಹೇಳಿದರು.
1950 ಹಾಗೂ 1966ರಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತ ನೆನೆದ ಪ್ರಧಾನಿ ಮೋದಿ, ಭಾರತೀಯ ಪರಮಾಣು ಭೌತಶಾಸ್ತ್ರಜ್ಞ ಹೋಮಿ ಜಹಾಂಗೀರ್ ಬಾಬಾ ಅವರು ಸೇರಿದಂತೆ ವಿಮಾನ ಅಪಘಾತದಲ್ಲಿ ಮೃತಪಟ್ಟ ಎಲ್ಲರಿಗೂ ನಾನು ವಂದಿಸುತ್ತೇನೆ ಎಂದರು.
ಇದೇ ವೇಳೆ ಫ್ರಾನ್ಸ್, ಭಾರತ ಸಂಬಂಧಕ್ಕೆ ಹೊಸ ವ್ಯಾಖ್ಯಾನ ನೀಡಿದ ಪ್ರಧಾನಿ ಮೋದಿ, ಇನ್ಫ್ರಾ ಎಂದರೆ ಇಂಡಿಯಾ ಫ್ರಾನ್ಸ್ (INFRA: India+France). ಭಾರತ, ಫ್ರಾನ್ಸ್ ಭಯೋತ್ಪಾನೆ ವಿರುದ್ಧ ಹೋರಾಡಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ಪ್ಯಾರಿಸ್ನಲ್ಲಿಯೂ ಗಣಪತಿ ಬಪ್ಪ ಮೋರೆಯಾ ಪಠಣ ಕೇಳಿಸಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


