ವಿದೇಶ

ಪೌರತ್ವ ಮಸೂದೆ: ಅಮಿತ್ ಶಾ ವಿರುದ್ಧ ನಿರ್ಬಂಧಕ್ಕೆ ಅಮೆರಿಕಾ ನಿಯೋಗ ಆಗ್ರಹ

ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರಯದ ಫೆಡರಲ್ ಯುಎಸ್ ಆಯೋಗವು, ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರುವಂತೆ ಅಮೆರಿಕಾವನ್ನು ಆಗ್ರಹಿಸಿದೆ.

ಪೌರತ್ವ ಮಸೂದೆ: ಅಮಿತ್ ಶಾ ವಿರುದ್ಧ ನಿರ್ಬಂಧಕ್ಕೆ ಅಮೆರಿಕಾ ನಿಯೋಗ ಆಗ್ರಹ
ಅಮಿತ್ ಶಾ
Published On :

ವಾಷಿಂಗ್ಟನ್: ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರಯದ ಫೆಡರಲ್ ಯುಎಸ್ ಆಯೋಗವು, ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರುವಂತೆ ಅಮೆರಿಕಾವನ್ನು ಆಗ್ರಹಿಸಿದೆ. 

ಪೌರತ್ವ ಮಸೂದೆ ತಪ್ಪು ದಿಕ್ಕಿನಲ್ಲಿ ಅಪಾಯಕಾರಿ ತಿರುವು ಪಡೆದುಕೊಳ್ಳಲಿದೆ ಎಂದು ನಿಯೋಗ ಆತಂಕ ವ್ಯಕ್ತಪಡಿಸಿದ್ದು, ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾದ ಕೂಡಲೇ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರಬೇಕೆಂದು ಆಗ್ರಹಿಸಿದೆ. 

ಪ್ರಸ್ತುತ ಲೋಕಸಭೆಯಲ್ಲಿ ಮಂಡನೆಗೊಂಡಿರುವ ಮಸೂದೆ ಅನ್ವಯ ಡಿ.31, 2014ರ ವರೆಗೂ ಧಾರ್ಮಿಕ ದಬ್ಬಾಳಿಕೆಗೆ ಒಳಗಾಗಿ ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಘಾನಿಸ್ತಾನದಿಂದ ಓಡಿ ಬಂದಿರುವ ಹಿಂದೂ, ಸಿಖ್, ಬುದ್ಧ, ಜೈನ್, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯಗಳ ಸದಸ್ಯರುಗಳನ್ನು ಅಕ್ರಮ ವಲಸಿಗರೆಂದು ಪರಿಗಣಿಸಲಾಗುವುದಿಲ್ಲ. ಆದರೆ, ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. 

ಸಂಸತ್ತಿನಲ್ಲಿ ಮಂಡಿಸಲಾಗಿರುವ ಮಸೂದೆ ಅತ್ಯಂತ ಸಮಸ್ಯೆಯಿಂದ ಕೂಡಿದ್ದು, ಪೌರತ್ವ ತಿದ್ದುಪಡಿ ಮಸೂದೆಯು ಧಾರ್ಮಿಕ ತಾರತಮ್ಯವನ್ನು ಕಾನೂನು ಬದ್ಧಗೊಳಿಸಲಿದೆಯೇ? ಎಂದು ನಿಯೋಗ ಪ್ರಶ್ನಿಸಿದೆ. 

ಒಂದು ವೇಳೆ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರಗೊಂಡಿದ್ದೇ ಆದರೆ, ಅಮೆರಿಕಾ ಸರ್ಕಾರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಪ್ರಮುಖ ನಾಯಕರ ಮೇಲೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದೆ. 

ವಿವಾದಿತ ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಮಸೂದೆಗೆ ಲೋಕಸಬೆ ಅಸ್ತು ಎಂದು ಹೇಳಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನಗಳಲ್ಲಿನ ಧಾರ್ಮಿಕ ಉಪದ್ರವಗಳಿಂದ ಬೇಸತ್ತು, ಅಲ್ಲಿಂದ ಭಾರತಕ್ಕೆ ಬಂದಿರುವ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ಭಾರತೀಯ ಪೌರತ್ವ ಉದ್ದೇಶವು ಮಸೂದೆಗೆ ಇದೆ. ಇನ್ನು ವಿಧೇಯಕವು ರಾಜ್ಯಸಭೆಯಲ್ಲಿ ಮಂಡನೆಯಾಗಿ ಅಲ್ಲೂ ಅನುಮೋದನೆ ಪಡೆದುಕೊಂಡಿದ್ದೇ ಆದರೆ, ಇವರಿಗೆಲ್ಲಾ ಬಾರತೀಯ ಪೌರತ್ವ ಲಭಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.