ಸಿಎಬಿ ಪರಿಣಾಮಗಳನ್ನು ವಿಶ್ವಸಂಸ್ಥೆ ಸೂಕ್ಷ್ಮವಾಗಿ ಗಮನಿಸುತ್ತಿದೆ: ಗುಟೆರಸ್
ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

ವಿಶ್ವಸಂಸ್ಥೆ: ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.
ಭಾರತ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಮಾಹಿತಿ ಇದೆ. ದೇಶದಲ್ಲಿ ವ್ಯಕ್ತವಾಗುವ ಪ್ರತಿಭಟನೆಯ ಬಗ್ಗೆಯೂ ಅರಿವಿದೆ. ಈ ಶಾಸನದ ಸಂಭವನೀಯ ಪರಿಣಾಮಗಳನ್ನು ವಿಶ್ಲೇಷಿಸುತ್ತಿರುವುದಾಗಿ ಹೇಳಿದ್ದಾರೆ.
ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ಈ ವಿವರಗಳನ್ನು ತಿಳಿಸಿದ್ದಾರೆ. ಈ ಕಾನೂನಿನ ಸ್ವರೂಪದ ಬಗ್ಗೆ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದಾರೆ ಎಂದರು.
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದಾಗಿನಿಂದ ಭಾರತದ ಈಶಾನ್ಯ ರಾಜ್ಯಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ನಿರಾಶ್ರಿತರಿಗೆ ಪೌರತ್ವ ಕಲ್ಪಿಸಲು ಹೊಸ ಕಾಯ್ದೆ ಅವಕಾಶ ನೀಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


