ಮತ್ತೆ ಬಾಲ ಬಿಚ್ಚಿದ ಪಾಕ್: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಗಿಲಾನಿಗೆ ಪಾಕ್ ವಿದೇಶಾಂಗ ಮಂತ್ರಿ ಕರೆ
ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಪಾಕಿಸ್ತಾನ ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದೆ.

Published On :
ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಪಾಕಿಸ್ತಾನ ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದೆ.
ಪ್ರಧಾನಿ ಭೇಟಿಗೂ ಮುನ್ನ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಗಿಲಾನಿಗೆ ಕರೆ ಮಾಡಿ ಮಾತನಾಡಿದ್ದಾರೆ. ಎಎನ್ಐ ವರದಿಯ ಪ್ರಕಾರ ಗಿಲಾನಿ ದೂರವಾಣಿ ಮೂಲಕ ಪಾಕ್ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಜಮ್ಮು-ಕಾಶ್ಮೀರದ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಕೆಲವೇ ದಿನಗಳ ಮುನ್ನ ಹುರಿಯತ್ ಮುಖ್ಯಸ್ಥೆ ಮಿರ್ವಾಜಾ ಫಾರೂಕ್ ಜೊತೆ ಖುರೇಷಿ ದೂರವಾಣಿ ಮಾತುಕತೆ ನಡೆಸಿದ್ದರು. ಈ ಘಟನೆ ಬಗ್ಗೆ ಪಾಕಿಸ್ತಾನದ ಹೈಕಮಿಷನರ್ ನ್ನು ಭಾರತ ತರಾಟೆಗೆ ತೆಗೆದುಕೊಂಡು ಪಾಕ್ ನಡೆಯನ್ನು ಖಂಡಿಸಿತ್ತು.
ಪಾಕಿಸ್ತಾನ ಕಾಶ್ಮೀರ ವಿಷಯದಲ್ಲಿ ಇದೇ ಮಾದರಿಯಲ್ಲಿ ಪ್ರಚೋದನಕಾರಿಯಾಗಿ ವರ್ತಿಸುವುದನ್ನು ಮುಂದುವರೆಸಿದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಭಾರತ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಎಚ್ಚರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಾಕಿಸ್ತಾನKashmiri separatist leader GeelaniPakistan Foreign Minister Qureshiಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕಪಾಕ್ ವಿದೇಶಾಂಗ ಮಂತ್ರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


