ವಿದೇಶ

ಪುಲ್ವಾಮಾ ದಾಳಿ: ಅಮೆರಿಕಾದ ಚೀನಾ, ಪಾಕ್ ರಾಯಭಾರಿ ಕಚೇರಿ ಎದುರು ಅನಿವಾಸಿ ಭಾರತೀಯರಿಂದ ಪ್ರತಿಭಟನೆ

ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿನ್ನಲೆಯಲ್ಲಿ ಪಾಕಿಸ್ತಾನ ಮತ್ತು ಚೀನಾ ರಾಯಭಾರಿ ಕಚೇರಿ ಮುಂದೆ...

ಪುಲ್ವಾಮಾ ದಾಳಿ: ಅಮೆರಿಕಾದ ಚೀನಾ, ಪಾಕ್ ರಾಯಭಾರಿ ಕಚೇರಿ ಎದುರು ಅನಿವಾಸಿ ಭಾರತೀಯರಿಂದ ಪ್ರತಿಭಟನೆ
ಪುಲ್ವಾಮಾ ದಾಳಿ ನಂತರದ ದೃಶ್ಯ
Published On :

ನ್ಯೂಯಾರ್ಕ್: ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿನ್ನಲೆಯಲ್ಲಿ ಪಾಕಿಸ್ತಾನ ಮತ್ತು ಚೀನಾ ರಾಯಭಾರಿ ಕಚೇರಿ ಮುಂದೆ ಭಾರತೀಯ ಅಮೆರಿಕಾ ಸಮುದಾಯದವರು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ. ನೆರೆ ದೇಶ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸಲು ಪಿತೂರಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಚೀನಾ ಬೆಂಬಲ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಚಿಕಾಗೊದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಹೊರಗೆ ಮೊಂಬತ್ತಿ ಪ್ರತಿಭಟನೆಯನ್ನು ಭಾರತೀಯ ಸಮುದಾಯದವರು ನಾಳೆ ನಡೆಸಿ ನಂತರ ಚೀನಾ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಸಾಗಲಿದ್ದಾರೆ.

ಪಾಕಿಸ್ತಾನ ಭಯೋತ್ಪಾದನೆಯ ಘನಘೋರ ಕೃತ್ಯವನ್ನು ಜಗಜ್ಜಾಹೀರುಪಡಿಸುವುದು ಮತ್ತು ಭಯೋತ್ಪಾದನೆಗೆ ಬೆಂಬಲಿಸುತ್ತಿರುವ ಪಾಕಿಸ್ತಾನ ಮತ್ತು ಚೀನಾ ದೇಶಗಳ ವಿರುದ್ಧ ಹೋರಾಡುವುದು ಈ ಪ್ರತಿಭಟನೆಯ ಮುಖ್ಯ ಉದ್ದೇಶ ಎಂದು ಸಂಘಟಕರು ತಿಳಿಸಿದ್ದಾರೆ.

ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮುಂದುವರಿಸುತ್ತಿರುವುದರ ವಿರುದ್ಧ ಒಟ್ಟಾಗಿ ಹೋರಾಡಲು ಅಮೆರಿಕಾ ಮತ್ತು ಬೇರೆ ದೇಶಗಳಿಗೆ ಇದು ಸರಿಯಾದ ಸಮಯ. ಪಾಕಿಸ್ತಾನ ಭಯೋತ್ಪಾದಕರ ಹುಟ್ಟು, ತರಬೇತಿ, ಅವರನ್ನು ಸಂಘಟನೆಗೆ ಸೇರಿಸಿಕೊಳ್ಳುವುದು, ಶಸ್ತ್ರಾಸ್ತ್ರಗಳ ಪೂರೈಕೆಗೆ ಹಣ ಒದಗಿಸುತ್ತಿದೆ, ಉಗ್ರರಿಗೆ ಪಾಕಿಸ್ತಾನ ಸ್ವರ್ಗವಿದ್ದಂತೆ ಎಂದು ಭಾರತೀಯ ಮೂಲದ ಅಮೆರಿಕಾ ಪ್ರಜೆ ಡಾ ಭರತ್ ಭರಣಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಮೆರಿಕಾ ಕೋಟ್ಯಂತರ ರೂಪಾಯಿ ಆರ್ಥಿಕ ನೆರವನ್ನು ಪಾಕಿಸ್ತಾನಕ್ಕೆ ಒದಗಿಸಿದರೂ ಕೂಡ ಅದು ಭಯೋತ್ಪಾದಕರನ್ನು ನಿಗ್ರಹಿಸುವಲ್ಲಿ ವಿಫಲವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.