ವಿದೇಶ

ಭಾರತದ ಯುದ್ಧ ಬೆದರಿಕೆಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ: ಪಾಕ್‌ ಸೇನೆ

ಪುಲ್ವಾಮಾ ಉಗ್ರ ದಾಳಿಯ ನಂತರ ಭಾರತ - ಪಾಕಿಸ್ತಾನ ನಡುವೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ದಾಳಿಗೂ ತಕ್ಕ ಪ್ರತ್ಯುತ್ತರ...

ಭಾರತದ ಯುದ್ಧ ಬೆದರಿಕೆಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ: ಪಾಕ್‌ ಸೇನೆ
ಆಸಿಫ್ ಗಫ‌ೂರ್‌
Published On :
ಇಸ್ಲಾಮಾಬಾದ್‌: ಪುಲ್ವಾಮಾ ಉಗ್ರ ದಾಳಿಯ ನಂತರ ಭಾರತ - ಪಾಕಿಸ್ತಾನ ನಡುವೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ದಾಳಿಗೂ ತಕ್ಕ ಪ್ರತ್ಯುತ್ತರ ನೀಡುಲು ನಾವು ಸಮರ್ಥರಾಗಿದ್ದೇವೆ ಎಂದು ಪಾಕ್ ಸೇನೆ ಹೇಳಿದೆ.
ನಾವು ಯುದ್ಧ ಮಾಡಲು ಬಯಸುತ್ತಿಲ್ಲ. ಆದರೆ ಭಾರತದ ಯುದ್ಧ ಬೆದರಿಕೆಗಳಿಗೆ ಪ್ರತಿಕ್ರಿಯಿಸುವ ಹಕ್ಕನ್ನು ಪಾಕಿಸ್ತಾನ ಹೊಂದಿದೆ ಎಂದು ಪಾಕ್ ಸೇನಾ ಡಿಜಿ ಮೇಜರ್‌ ಜನರಲ್‌ ಆಸಿಫ್ ಗಫ‌ೂರ್‌ ಅವರು ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗಫೂರ್ ಅವರು, ಭಾರತ ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಯಾವುದೇ ತನಿಖೆ ಇಲ್ಲದೆ ಪಾಕಿಸ್ತಾನದ ವಿರುದ್ಧ ಆರೋಪ ಮಾಡುತ್ತಿದೆ ಎಂದರು.
'ನಾವು  ಯಾವುದೇ ಬೆದರಿಕೆಗೂ ಸಂಪೂರ್ಣ ಬಲದಿಂದ ಪ್ರತಿಕ್ರಿಯೆ ನೀಡುತ್ತೇವೆ. ಇದು ನಿಮಗೆ ಅಚ್ಚರಿ ನೀಡಲಿದೆ. ಪಾಕ್‌ನೊಂದಿಗೆ ಗೊಂದಲ ಬೇಡ' ಎಂದಿರುವುದಾಗಿ ಪಿಟಿಐ ವರದಿ ಮಾಡಿದೆ.
ಪಾಕಿಸ್ತಾನದ ಸೇನೆ ಸಾಕಷ್ಟು ಯುದ್ಧಗಳನ್ನು ಮಾಡಿದ ಅನುಭವ ಹೊಂದಿದೆ. ಯಾವುದೇ ದಾಳಿಗೂ ಪ್ರತ್ಯುತ್ತರ ಕೊಡಬಲ್ಲಷ್ಟು ಸಮರ್ಥವಾಗಿದೆ. ನಮ್ಮ ದೇಶದ ಸಾರ್ವಭೌಮತೆಗೆ ಧಕ್ಕೆ ಬರುವಂಥ ಸ್ಥಿತಿ ಇದ್ದರೆ ಅದಕ್ಕೆ ಹೋರಾಡಲು ಸೇನೆ ಸಿದ್ಧವಿದೆ ಎಂದು ಪಾಕ್ ಸೇನಾಧಿಕಾರಿ ಹೇಳಿದರು. ಆದರೆ, ಪಾಕಿಸ್ತಾನ ಮೊದಲು ಯುದ್ಧ ಆರಂಭಿವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.