ಪಾಕಿಸ್ತಾನದಿಂದ ಭಾರತ ಮೇಲೆ ಪರಮಾಣು ದಾಳಿ ಆಗಲ್ಲ- ಮುಷರಫ್
ಎರಡು ಪರಮಾಣು ರಾಷ್ಟ್ರಗಳ ನಡುವಿನ ಸಂಬಂಧ ಅಪಾಯದ ಹಂತ ತಲುಪಿದರೆ ಪಾಕಿಸ್ತಾನ ಭಾರತದ ಮೇಲೆ ಪರಮಾಣು ದಾಳಿ ನಡೆಸಲಿದೆ ಎಂಬ ಪ್ರಸ್ತಾವವನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ನಿರಾಕರಿಸಿದ್ದಾರೆ.

ಅಬುದಾಬಿ: ಎರಡು ಪರಮಾಣು ರಾಷ್ಟ್ರಗಳ ನಡುವಿನ ಸಂಬಂಧ ಅಪಾಯದ ಹಂತ ತಲುಪಿದರೆ ಪಾಕಿಸ್ತಾನ ಭಾರತದ ಮೇಲೆ ಪರಮಾಣು ದಾಳಿ ನಡೆಸಲಿದೆ ಎಂಬ ಪ್ರಸ್ತಾವವನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ನಿರಾಕರಿಸಿದ್ದಾರೆ.
ಒಂದು ವೇಳೆ ಪಾಕಿಸ್ತಾನ ಭಾರತದ ಮೇಲೆ ಒಂದು ಅಟೋಮಿಕ್ ಬಾಂಬ್ ಹಾಕಿದ್ದರೆ ಭಾರತ 20 ಬಾಂಬ್ ಗಳನ್ನು ಹಾಕಿ ನಮ್ಮನ್ನು ನಿರ್ನಾಮ ಮಾಡಲಿದೆ ಎಂದು ಅವರು ಹೇಳಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಅಬುದಾಬಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಷರಫ್, ಭಾರತ ಮತ್ತು ಪಾಕಿಸ್ತಾನದ ಸಂಬಂಧ ಮತ್ತೆ ಅಪಾಯದ ಹಂತ ತಲುಪಿದೆ. ಯಾವುದೇ ಪರಮಾಣು ದಾಳಿ ನಡೆಯಲ್ಲ, ಒಂದು ವೇಳೆ ನಾವು ಒಂದು ಅಟೋಮಿಕ್ ಬಾಂಬ್ ಹಾಕಿದರೆ, ಭಾರತ ನಮ್ಮ ಮೇಲೆ 20 ಬಾಂಬ್ ಗಳನ್ನು ಹಾಕಲಿದೆ. ಆದ್ದರಿಂದ ನಾವು ಅವರ ಮೇಲೆ ಮೊದಲು 50 ಬಾಂಬ್ ಗಳನ್ನು ಹಾಕಬೇಕು, ಅದರಿಂದ ಮೊದಲು 50 ಬಾಂಬ್ ಗಳನ್ನು ಹಾಕಲು ಪಾಕಿಸ್ತಾನ ಸಿದ್ದ ಇದೆಯಾ? ಎಂದು ಕೇಳಿದ್ದಾರೆ.
ಪಾಕಿಸ್ತಾನದೊಂದಿಗೆ ಇಸ್ರೇಲ್ ಸಂಬಂಧ ವೃದ್ದಿಯಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟಿರುವ ಮುಷರಫ್, ಪಾಕಿಸ್ತಾನದಲ್ಲಿನ ರಾಜಕೀಯ ಪರಿಸ್ಥಿತಿ ಉತ್ತಮವಾಗಿದೆ. ಅರ್ಧದಷ್ಟು ಸಚಿವರು ನಮ್ಮವರಾಗಿದ್ದಾರೆ. ಕಾನೂನು ಸಚಿವ ಮತ್ತು ಅಟಾರ್ನಿ ಜನರಲ್ ಅವರು ನಮ್ಮ ವಕೀಲರಾಗಿದ್ದಾರೆ ಎಂದು ಮುಷರಫ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


