ಶಾಂತಿ ಸ್ಥಾಪನೆಗೆ ಒಂದು ಅವಕಾಶ ಕೊಡಿ: ಭಾರತಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮನವಿ
ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ.ತಮ್ಮ ಮಾತಿಗೆ ಬದ್ಧನಾಗಿದ್ದು ಶಾಂತಿ ನೆಲೆಸಲು ಅವಕಾಶ ನೀಡಬೇಕೆಂದು ...

Published On :
ಇಸ್ಲಾಮಾಬಾದ್: ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ. ತಮ್ಮ ಮಾತಿಗೆ ಬದ್ಧನಾಗಿದ್ದು ಶಾಂತಿ ನೆಲೆಸಲು ಅವಕಾಶ ನೀಡಬೇಕೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪುನರುಚ್ಛರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜಸ್ತಾನದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದಾಗ, ಭಯೋತ್ಪಾದನೆ ವಿರುದ್ಧ ಇಡೀ ವಿಶ್ವದಲ್ಲಿ ಸಹಮತ ವ್ಯಕ್ತವಾಗಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರನ್ನು ಶಿಕ್ಷಿಸಲು ನಾವು ಮುಂದಡಿ ಇಡುತ್ತಿದ್ದೇವೆ. ಈ ಬಾರಿ ಭಯೋತ್ಪಾದನೆ ವಿರುದ್ಧ ಹೋರಾಡುವ ಸೂಕ್ತ ಸಮಯ ಬಂದಿದೆ. ಭಾರತ ಬದಲಾಗುತ್ತಿದೆ. ಸೈನಿಕರು ಹುತಾತ್ಮರಾದ ನೋವನ್ನು ಮರೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧ ಹೇಗೆ ಹೋರಾಡಬೇಕೆಂದು ಮತ್ತು ಅದನ್ನು ಹೇಗೆ ಮಟ್ಟ ಹಾಕಬೇಕೆಂದು ನಮಗೆ ಗೊತ್ತಿದೆ ಎಂದು ಹೇಳಿದ್ದರು.
ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ. ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ" ಎಂದು ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ.
ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾದ ನಂತರ ತಾವು ದೂರವಾಣಿ ಕರೆ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸಂದರ್ಭದಲ್ಲಿ ಬಡತನ ಮತ್ತು ಅನಕ್ಷರತೆ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾಗ ನಾನು ಪ್ಯಾಥನ್ ಮಗ ಎಂದು ಇಮ್ರಾನ್ ಹೇಳಿದ್ದರು,ಪ್ಯಾಥನ್ ಎಂದರೆ ಇರಾನಿನ ಒಂದು ಜನಾಂಗ. ಇವರು ಪ್ರಾಮಾಣಿಕತೆ ಮತ್ತು ಸತ್ಯಕ್ಕೆ ಹೆಸರಾದವರು. ಆದರೆ ಇಂದು ಅವರು ತಮ್ಮ ಮಾತಿನ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಮೋದಿ ಟೀಕಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಂತರ ನಿನ್ನೆ ಪಾಕಿಸ್ತಾನ ಪ್ರಧಾನಿ ಸಚಿವಾಲಯ ಹೇಳಿಕೆ ಹೊರಡಿಸಿದ್ದು ಅದರಲ್ಲಿ, ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಮಾತಿಗೆ ಬದ್ಧವಾಗಿದ್ದು ಭಾರತ ನಮಗೆ ಕ್ರಿಯಾಶೀಲ ಗುಪ್ತಚರ ಕೊಟ್ಟರೆ ನಾವು ತಕ್ಷಣವೇ ಕಾರ್ಯಪ್ರವೃತ್ತವಾಗುತ್ತೇವೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಶಾಂತಿಗೆ ಒಂದು ಅವಕಾಶ ಕೊಡಿ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ ಎಂದು ಹೇಳಿಕೆಯಲ್ಲಿ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


