ಭಾರತ ಮಾಡಿದ ಆಕ್ರಮಣಕ್ಕೆ ತಕ್ಕ ಶಾಸ್ತಿ ಕಾದಿದೆ: ಪಾಕ್ ವಿದೇಶಾಂಗ ಸಚಿವ
ಗಡಿನಿಯಂತ್ರಣ ರೇಖೆ ದಾಟಿ ಭಾರತ ಆಕ್ರಮಣ ಮಾಡಿದ್ದು, ಸೂಕ್ತ ಸಮಯದಲ್ಲಿ ಇಸ್ಲಮಾಬಾದ್ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಪಾಕ್ ವಿದೇಶಾಂಗ ಸಚಿವ ...

Published On :
ಇಸ್ಲಾಮಾಬಾದ್: ಗಡಿನಿಯಂತ್ರಣ ರೇಖೆ ದಾಟಿ ಭಾರತ ಆಕ್ರಮಣ ಮಾಡಿದ್ದು, ಸೂಕ್ತ ಸಮಯದಲ್ಲಿ ಇಸ್ಲಮಾಬಾದ್ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಪಾಕ್ ವಿದೇಶಾಂಗ ಸಚಿವ ಶಾ ಮೊಹಮದ್ ಖುರೇಶಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.,
ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ 3.30ರ ಸುಮಾರಿಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದ ನಂತರ ಪ್ರತಿಕ್ರಿಯೆ ನೀಡಿರುವ ಖುರೇಶಿ, ಭಾರತಕ್ಕೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದ್ದಾರೆ.
ಭಾರತದ ವೈಮಾನಿಕ ದಾಳಿಗೆ ತತ್ತರಿಸಿರುವ ಪಾಕಿಸ್ತಾನ, ತುರ್ತು ಸಭೆ ನಡೆಸಿ ಮುಂದಿನ ನಡೆಗಳ ಬಗ್ಗೆ ಚರ್ಚಿಸಿದೆ.
ವೈಮಾನಿಕ ದಾಳಿಯ ಬಗ್ಗೆ ಸ್ವತಃ ಪಾಕಿಸ್ತಾನ ಒಪ್ಪಿಕೊಂಡಿದೆ, ಪುಲ್ವಾಮಾ ಉಗ್ರ ದಾಳಿ ನಡೆದು 49 ಯೋಧರು ಹುತಾತ್ಮರಾದ 12 ದಿನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಾಕಿಸ್ತಾನIndian Air Forceಫೈಟರ್ ಜೆಟ್fighter jetsIAF strikes in PakistanShah Mehmood Qureshi ಭಾರತೀಯ ವಾಯುಸೇನೆಶಾ ಮೊಹಮದ್ ಖುರೇಶಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


