ಇಬ್ಬರಲ್ಲ, ಒಬ್ಬ ಐಎಎಫ್ ಪೈಲಟ್ ಮಾತ್ರ ನಮ್ಮ ವಶದಲ್ಲಿದ್ದಾರೆ: ಉಲ್ಟಾ ಹೊಡೆದ ಪಾಕ್
ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇಬ್ಬರು ಪೈಲಟ್ಗಳು ನಮ್ಮ ವಶದಲ್ಲಿದ್ದಾರೆ ಎಂದಿದ್ದ ಪಾಕಿಸ್ತಾನ...

Published On :
ಇಸ್ಲಾಮಾಬಾದ್: ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇಬ್ಬರು ಪೈಲಟ್ಗಳು ನಮ್ಮ ವಶದಲ್ಲಿದ್ದಾರೆ ಎಂದಿದ್ದ ಪಾಕಿಸ್ತಾನ ಈಗ ಉಲ್ಟಾ ಹೊಡೆದಿದ್ದು, ಇಬ್ಬರಲ್ಲ, ಒಬ್ಬರು ಐಎಎಫ್ ಪೈಲಟ್ ಮಾತ್ರ ನಮ್ಮ ವಶದಲ್ಲಿದ್ದಾರೆ ಎಂದು ಹೇಳಿದೆ.
ಇಬ್ಬರಲ್ಲಿ ಒಬ್ಬ ಐಎಎಫ್ ಪೈಲಟ್ನನ್ನು ನಮ್ಮ ವಶಕ್ಕೆ ಪಡೆದಿದ್ದೇವೆ ಎಂದು ಪಾಕಿಸ್ತಾನ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಭಾರತದ ವಿಂಗ್ ಕಮಾಂಡರ್ ಅಭಿನಂದನ್ ನಮ್ಮ ವಶದಲ್ಲಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಬದ್ಗಾಮ್ ನಲ್ಲಿ ಪತನಗೊಂಡ ವಿಮಾನಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಅವರು ಇಬ್ಬರು ಪೈಲಟ್ಗಳನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


