2020 ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಸ್ಪರ್ಧೆ
2020ರಲ್ಲಿ ನಡೆಯಲಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಕಮಲಾ ಹ್ಯಾರಿಸ್ ಹೇಳಿದ್ದಾರೆ

ವಾಷಿಂಗ್ಟನ್: 2020ರಲ್ಲಿ ನಡೆಯಲಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಕಮಲಾ ಹ್ಯಾರಿಸ್ ಹೇಳಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಾವಧಿಯಲ್ಲಿ ನಡೆದ ಅನ್ಯಾಯಗಳ ವಿರುದ್ಧ ಹೋರಾಡುವ ಸಂದರ್ಭ ಬಂದಿದೆ ಎಂದು ಅವರು ಹೇಳಿದ್ದಾರೆ.
ಕಮಲಾ ಹ್ಯಾರಿಸ್ ಪ್ರಚಾರದ ವಿಡಿಯೋವನ್ನು ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮುಂದಿನ ಜೀವನ ನೆಮ್ಮದಿಯಿಂದ ಕೂಡಿರಲು ತಮ್ಮನ್ನು ಬೆಂಬಲಿಸುವಂತೆ ಬೆಂಬಲಿಗರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
ನ್ಯಾಯ, ಯೋಗ್ಯತೆ, ಸಮಾನತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಇವುಗಳ ಕೇವಲ ಶಬ್ದಗಳಲ್ಲ. ಅಮೆರಿಕನ್ನರು ಪಾಲಿಸುವಂತಹ ಮೌಲ್ಯಗಳು ಇವೇ. ಇವುಗಳೆಲ್ಲವೂ ಈಗ ಸಾಲಿನಲ್ಲಿವೆ ಎಂದು ಹ್ಯಾರಿಸ್ ಹೇಳಿದ್ದಾರೆ.
ಮುಂದಿನ ದೇಶದ ಭವಿಷ್ಯ ಪ್ರಜೆಗಳು ಹಾಗೂ ಅಮೆರಿಕದ ನಾಗರಿಕರ ಮೌಲ್ಯಗಳಿಗಾಗಿ ಹೋರಾಡಲು ಧ್ವನಿ ಎತ್ತುವ ಇತರರನ್ನು ಅವಲಂಬಿಸಿದೆ. ಅದಕ್ಕಾಗಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಡೆಮಾಕ್ರಟಿಕ್ ಕ್ಯಾಲಿರ್ಪೋನಿಯಾ ಸೆನೆಟರ್ ಹೇಳಿದ್ದಾರೆ.
ಕಮಲಾ ಹ್ಯಾರಿಸ್ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊದಲ ಆಫ್ರಿಕನ್- ಅಮೆರಿಕಾದ ಮಹಿಳೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


