ಅಮೆರಿಕ ಸೆನೆಟ್‌ನಲ್ಲಿ ಕೈಯಲ್ಲಿ ಭಗವದ್ಗೀತೆ ಹಿಡಿದು ಮೋನಾ ಪ್ರಮಾಣವಚನ!
ಸನಾತನ ಧರ್ಮ ಸಾವಿರಾರು ವರ್ಷಗಳಿಂದ ಈ ದೇಶವನ್ನು ಮುನ್ನಡೆಸಿಕೊಂಡು ಬಂದಿದ್ದು ಜನರ ಜೀವನದ ಅವಿಭಾಜ್ಯ ಅಂಗ. ಭಾರತೀಯ ವಿಶ್ವದ...

Published On :
ವಾಷಿಂಗ್ಟನ್: ಸನಾತನ ಧರ್ಮ ಸಾವಿರಾರು ವರ್ಷಗಳಿಂದ ಈ ದೇಶವನ್ನು ಮುನ್ನಡೆಸಿಕೊಂಡು ಬಂದಿದ್ದು ಜನರ ಜೀವನದ ಅವಿಭಾಜ್ಯ ಅಂಗ. ಭಾರತೀಯ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ತನ್ನ ಭಾರತೀಯತೆಯನ್ನು ತನ್ನ ಧರ್ಮವನ್ನು ಮರೆಯಲು ಸಾಧ್ಯವೇ ಇಲ್ಲ.
ಅಂತೆ ಅಮೆರಿಕದ ಡೆಮಾಕ್ರೆಟಿಕ್ ಪಕ್ಷದ ಸದಸ್ಯೆ ಭಾರತೀಯ ಮೂಲದ ಮೋನಾ ದಾಸ್ ವಾಷಿಂಗ್ಟನ್ ರಾಜ್ಯದ 47ನೇ ಜಿಲ್ಲೆಯ ಸೆನೆಟರ್ ಆಗಿ ಅಧಿಕಾರ ಸ್ವೀಕರಿಸಿದ್ದು ಕೈಯಲ್ಲಿ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಹಾರ ಮೂಲದ ವೈದ್ಯ ಡಾ. ಬಿಎನ್ ದಾಸ್ ಅವರ ಮೊಮ್ಮಗಳಾಗಿರುವ ಮೋನ ದಾಸ್, 8 ತಿಂಗಳ ಮಗುವಾಗಿದ್ದಾದಲೇ ತಮ್ಮ ಪೋಷಕರೊಂದಿಗೆ ಅಮೆರಿಕಕ್ಕೆ ತೆರಳಿದ್ದರು.
ಇನ್ನು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ಆದರ್ಶ ಎಂದು ಹೇಳುವ ಮೋನಾ ದಾಸ್ ತಮ್ಮ ಅಧಿಕಾರವಧಿಯಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


