ಉಗ್ರರಿಗೆ ಹಣ ಪೂರೈಕೆ: ಹಫೀಜ್ ಸಯೀದ್ ವಿರುದ್ಧ 23 ಪ್ರಕರಣ ದಾಖಲಿಸಿದ ಪಾಕಿಸ್ತಾನ
ಉಗ್ರ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಆರೋಪದ ಮೇರೆಗೆ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಹಾಗೂ ಆತನ 21 ಸಹಚರರ ವಿರುದ್ಧ ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಇಲಾಖೆ 23 ಪ್ರಕರಣಗಳನ್ನು ದಾಖಲಿಸಿದೆ.

Published On :
ಇಸ್ಲಾಮಾಬಾದ್ : ಉಗ್ರ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಆರೋಪದ ಮೇರೆಗೆ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಹಾಗೂ ಆತನ 21 ಸಹಚರರ ವಿರುದ್ಧ ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಇಲಾಖೆ 23 ಪ್ರಕರಣಗಳನ್ನು ದಾಖಲಿಸಿದೆ.
ಉಗ್ರ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಅಂತಾರಾಷ್ಟ್ರೀಯ ಒತ್ತಡಕ್ಕೆ ತಲೆಬಾಗಿರುವ ಪಾಕಿಸ್ತಾನ ಲಷ್ಕರ್ ಇ- ತೊಯ್ಬಾ ಸಂಘಟನೆಗಾಗಿ ನಿಧಿ ಸಂಗ್ರಹಿಸಲು ಐದು ಟ್ರಸ್ಟ್ ಗಳನ್ನು ಬಳಸಿಕೊಂಡು ಆರೋಪದ ಮೇರೆಗೆ 23 ಪ್ರಕರಣಗಳನ್ನು ದಾಖಲಿಸಿದೆ.
ಎಲ್ ಇಟಿ ಜೊತೆಗೆ ನಂಟು ಹೊಂದಿದ್ದ ಜಮಾಾತ್ - ಉದ್ - ದವಾ, ಮತ್ತು ಪಲ್ಹಾ- ಇ-ಇನ್ಸಾಯಿತ್ ಪೌಂಢೇಷನ್ ಕೂಡಾ ಗುರಿ ಮಾಡಲಾಗಿದೆ. ಈ ಸಂಘಟನೆಗಳ ಎಲ್ಲಾ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


