ಉಗ್ರ ಹಫೀಜ್ ಸಯ್ಯೀದ್ ಬಂಧನ: 2 ವರ್ಷದಿಂದ ಪಾಕ್ ಮೇಲೆ ಒತ್ತಡ ಹೇರಲಾಗಿತ್ತು ಎಂದ ಡೊನಾಲ್ಡ್ ಟ್ರಂಪ್
ಪಾಕಿಸ್ತಾನದಲ್ಲಿ ಜುಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಮುಂಬೈ ಉಗ್ರ ದಾಳಿ ರೂವಾರಿ ಹಫೀಜ್ ಸಯ್ಯೀದ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ.

Published On :
ವಾಷಿಂಗ್ಟನ್: ಪಾಕಿಸ್ತಾನದಲ್ಲಿ ಜುಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಮುಂಬೈ ಉಗ್ರ ದಾಳಿ ರೂವಾರಿ ಹಫೀಜ್ ಸಯ್ಯೀದ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ.
ನಿನ್ನೆಯಷ್ಟೇ ಮುಂಬೈ ದಾಳಿ ರೂವಾರಿ ಮತ್ತು ಲಷ್ಕರ್ ಇ ತೊಯ್ಬಾ, ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಬಂಧಿಸಲಾಗಿತ್ತು. ಹಫೀಜ್ ಸಯ್ಯೀದ್ ಮತ್ತು ಆತನ ನೇತೃತ್ವದ ಲಷ್ಕರ್ ಸಂಘಟನೆಗಳ ವಿರುದ್ಧ ದಾಖಲಾಗಿರುವ ಸುಮಾರು 23 ಉಗ್ರ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ನಿನ್ನೆಯಷ್ಟೇ ಉಗ್ರರಿಗೆ ನೆರವು ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯೀದ್ ಗೆ ಪಾಕಿಸ್ತಾನದ ಭಯೋತ್ಪಾದಕ ನಿಗ್ರಹ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, 'ಹತ್ತು ವರ್ಷಗಳ ಹುಡುಕಾಟದ ನಂತರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಎಂದು ಕರೆಯಲ್ಪಡುವವರನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಅವನನ್ನು ಹುಡುಕಲು ಕಳೆದ ಎರಡು ವರ್ಷಗಳಿಂದ ಅಮೆರಿಕ ಸರ್ಕಾರದಿಂದ ಪಾಕಿಸ್ತಾನದ ಮೇಲೆ ಹೆಚ್ಚಿನ ಒತ್ತಡ ಹೇರಲಾಗಿತ್ತು ಎಂದು ಹೇಳಿದ್ದಾರೆ.
ಆ ಮೂಲಕ ಹಫೀಜ್ ಸಯ್ಯೀದ್ ಬಂಧನದ ಹಿಂದೆ ತಮ್ಮ ಪಾತ್ರವೂ ಇದೆ ಎಂದು ಪರೋಕ್ಷವಾಗಿ ಟ್ರಂಪ್ ಹೇಳಿಕೊಂಡಿದ್ದಾರೆ.
ನವೆಂಬರ್ 26, 2008ರಲ್ಲಿ ಮುಂಬೈ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ 180ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದ್ದರು. ನಂತರದ ತನಿಖೆಯಲ್ಲಿ ಈ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್ಐ ಮತ್ತು ಹಫೀಜ್ ಸಯೀದ್ ಕೈವಾಡ ಇರೋದು ಬಹಿರಂಗವಾಗಿತ್ತು. ಈ ಪ್ರಕರಣದಲ್ಲಿ ಹಫೀಜ್ ಸಯೀದ್ನ್ನ ಮೊಸ್ಟ್ ವಾಂಟೆಡ್ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Washingtonವಾಷಿಂಗ್ಟನ್Hafiz Saeedಹಫೀಜ್ ಸಯ್ಯೀದ್Mumbai terror attacksಮುಂಬೈ ಉಗ್ರ ದಾಳಿDonald Trumpಡೊನಾಲ್ಡ್ ಟ್ರಂಪ್ಪಾಕಿಸ್ತಾನ ಜೈಲುPakistan Jail
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


