ಕುಲಭೂಷಣ್ ಜಾಧವ್‍ಗೆ ರಾಜತಾಂತ್ರಿಕ ಸಂಪರ್ಕ ಕಲ್ಪಿಸಲು ಪಾಕ್ ಒಪ್ಪಿಗೆ
ವಿಯೆನ್ನಾ ಸಮಾವೇಶದ 36ನೇ ಪರಿಚ್ಚೇದದ ಅಡಿಯಲ್ಲಿ ನಿಯಮಗಳನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ನೀಡಿದ ಎರಡು ದಿನಗಳ ನಂತರ, ಇಸ್ಲಾಮಾಬಾದ್ ಶುಕ್ರವಾರ

Published On :
ಇಸ್ಲಾಮಾಬಾದ್: ವಿಯೆನ್ನಾ ಸಮಾವೇಶದ 36ನೇ ಪರಿಚ್ಚೇದದ ಅಡಿಯಲ್ಲಿ ನಿಯಮಗಳನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ನೀಡಿದ ಎರಡು ದಿನಗಳ ನಂತರ, ಇಸ್ಲಾಮಾಬಾದ್ ಶುಕ್ರವಾರ ಕುಲಭೂಷಣ್ ಜಾಧವ್ ಅವರಿಗೆ ರಾಜತಾಂತ್ರಿಕ ಸಂಪರ್ಕ ಪಡೆಯಲು ಒಪ್ಪಿಗೆ ಸೂಚಿಸಿದೆ.
ಪಾಕಿಸ್ತಾನದ ಕಾನೂನುಗಳ ಪ್ರಕಾರ ಕಮಾಂಡರ್ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನವು ರಾಜತಾಂತ್ರಿಕ ಸಂಪರ್ಕ ನೀಡುತ್ತದೆ, ಇದಕ್ಕಾಗಿ ವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ವಿದೇಶಾಂಗ ಕಚೇರಿ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.
ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶದ ಪರಿಚ್ಚೇದ 36, ಕಲಮು 1 (ಬಿ) ಅಡಿಯಲ್ಲಿ ಜಾಧವ್ ಅವರ ಹಕ್ಕುಗಳ ಬಗ್ಗೆ ತಿಳಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನವಿದೇಶಾಂಗ ಸಚಿವಾಲಯForeign Ministryಕುಲಭೂಷಣ್ ಜಾಧವ್Kulbushan JadhavConsular accessರಾತಾಂತ್ರಿಕ ನೆರವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


