ಬ್ರಿಟನ್ ಮುಂದಿನ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್
ಬ್ರಿಟನಿನ್ನ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಬೋರಿಸ್ ಜಾನ್ಸನ್ ಗೆದಿದ್ದು, ಮುಂದಿನ ಪ್ರಧಾನ ಮಂತ್ರಿಯಾಗಲಿದ್ದಾರೆ.

Published On :
ಲಂಡನ್ : ಬ್ರಿಟನಿನ್ನ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಬೋರಿಸ್ ಜಾನ್ಸನ್ ಗೆದಿದ್ದು, ಮುಂದಿನ ಪ್ರಧಾನ ಮಂತ್ರಿಯಾಗಲಿದ್ದಾರೆ.
ಕನ್ಸರ್ವೇಟಿವ್ ಪಕ್ಷದ ಸದಸ್ಯರು ಇಂದು ಮತದಾನ ಮಾಡಿದ್ದು, ತಮ್ಮ ಪ್ರತಿಸ್ಪರ್ಧಿ ಜೆರೆಮಿ ಹಂಟ್ ಅವರಿಗಿಂತ ಹೆಚ್ಟಿನ ಮತಗಳ ಅಂತರದಿಂದ ಬೋರಿಸ್ ಜಾನ್ಸನ್ ಗೆಲುವು ಸಾಧಿಸಿದ್ದಾರೆ.
ಪ್ರಧಾನಿ ಥೆರೇಸಾ ಮೇ ನಾಳೆ ಸಂಪ್ರದಾಯಿಕವಾಗಿ ಬೋರಿಸ್ ಜಾನ್ಸನ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.
55 ವರ್ಷದ ಜಾನ್ಸನ್ ಮಹತ್ವಕಾಂಕ್ಷಿಯಾಗಿದ್ದಾರೆ ಆದರೆ, ಅನಿಯಮಿತ ರಾಜಕಾರಣಿ, ಉನ್ನತ ಅಧಿಕಾರಿಯಾಗಿದ್ದ ಸಂದರ್ಭದಲ್ಲಿಯೇ ರಾಜಕೀಯ ವೃತ್ತಿಜೀವನ ಆರಂಭಿಸಿದ್ದಾರೆ.
ಒಪ್ಪಂದದ ಅವಧಿಗೂ ಮುನ್ನವೇ ಬ್ರಿಟನ್ ಯುರೋಪಿಯನ್ ಒಕ್ಕೂಟದಿಂದ ನಿರ್ಗಮಿಸಲಿದೆ ಎಂದು ಜಾನ್ಸನ್ ಹೇಳುತ್ತಿದ್ದಾರೆ. ಆದರೆ, ಒಪ್ಪಂದದಂತೆ ಹೊರಗೆ ಬಾರದಂತೆ ತಡೆಯಲು ಬ್ರಿಟನ್ ಸಂಸತ್ ಪ್ರಯತ್ನಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Conservative Partyಕನ್ಸರ್ವೇಟಿವ್ ಪಕ್ಷಬ್ರಿಟನ್ ಪ್ರಧಾನಿಥೆರೇಸಾ ಮೇBoris JohnsonBritain UK Prime MinisterTheresa May ಬೊರಿಸ್ ಜಾನ್ಸನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


