ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ: 8 ಸಾವು, 60 ಮಂದಿಗೆ ಗಾಯ
ಫಿಲಿಪೈನ್ಸ್‌ನ ಮುಖ್ಯ ಲುಪನ್ ದ್ವೀಪದ ಉತ್ತರದ ಬಟಾನೆಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಅವಳಿ ಭೂಕಂಪನದಲ್ಲಿ ಮೃತಪಟ್ಟ....

Published On :
ಮನಿಲಾ: ಫಿಲಿಪೈನ್ಸ್‌ನ ಮುಖ್ಯ ಲುಪನ್ ದ್ವೀಪದ ಉತ್ತರದ ಬಟಾನೆಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಅವಳಿ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ ಈ ಘಟನೆಯಲ್ಲಿ ಇತರೆ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಸಂಭವಿಸಿದ 5.4 ತೀವ್ರತೆಯ ಮೊದಲ ಭೂಕಂಪದಲ್ಲಿ ಐವರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ ಎಂದು ಬಟಾನೆಸ್ ಗವರ್ನರ್ ಮರಿಲೌ ಸೈಕೊ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಕಂಪನದಿಂದ ಚರ್ಚ್ ಮತ್ತು ಇತರ ಮನೆಗಳಿಗೆ ವ್ಯಾಪಕ ಹಾನಿಯಾಗಿದೆ ಎಂದು ಅವರು ಹೇಳಿದರು.
6.4 ತೀವ್ರತೆಯ ಎರಡನೇ ಭೂಕಂಪನ ಇಟ್ಬಯತ್‌ನ ವಾಯುವ್ಯಕ್ಕೆ 19 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದೂ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


