ವಿಶ್ವಮಟ್ಟದಲ್ಲಿ ಭಾರತದ ಸ್ಥಾನ ಸುಭದ್ರ: ಅನಿವಾಸಿ ಭಾರತೀಯರೊಂದಿಗೆ ಮೋದಿ ಭಾಷಣ
ನಾನಾ ವಿಚಾರಗಳಲ್ಲಿ ಸಾಗರೋತ್ತರ ಭಾರತೀಯ ಸಮುದಾಯ ಹಾಗೂ ಭಾರತ ಸರ್ಕಾರದ ದೃಷ್ಟಿಕೋನ ಒಂದೇ ರೀತಿಯಲ್ಲಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published On :
ಕೊಲಂಬೊ: ನಾನಾ ವಿಚಾರಗಳಲ್ಲಿ ಸಾಗರೋತ್ತರ ಭಾರತೀಯ ಸಮುದಾಯ ಹಾಗೂ ಭಾರತ ಸರ್ಕಾರದ ದೃಷ್ಟಿಕೋನ ಒಂದೇ ರೀತಿಯಲ್ಲಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂಡಿಯಾ ಹೌಸ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ವಿಶ್ವಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗಿರುವುದಕ್ಕೆ ಅನಿವಾಸಿ ಭಾರತೀಯರ ಕೊಡುಗೆ ಮಹತ್ವದಾಗಿದೆ. ಏಲ್ಲಿಯೇ ಹೋದರು ಅನಿವಾಸಿ ಭಾರತೀಯ ಭಾರತೀಯರ ಯಶಸ್ಸು ಹಾಗೂ ಸಾಧನೆಗಳನ್ನು ಹೇಳುವುದಾಗಿ ತಿಳಿಸಿದರು.
ಇಂಡಿಯಾ ಹೌಸ್ ನಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅನಿವಾಸಿ ಭಾರತೀಯರು ಭಾಷಣದ ನಂತರ ನರೇಂದ್ರ ಮೋದಿ ಅವರಿಗೆ ಹಸ್ತ ಲಾಘವ ಮಾಡುವ ಮೂಲಕ ಅಭಿನಂದಿಸಿದರು.
ಇದಕ್ಕೂ ಮುನ್ನ ನರೇಂದ್ರ ಮೋದಿ ಶ್ರೀಲಂಕಾ ಅಧ್ಯಕ್ಷ ಸಿರಿಸೇನಾ ಹಾಗೂ ವಿರೋಧ ಪಕ್ಷದ ನಾಯಕ ಮಹಿಂದಾ ರಾಜಪಕ್ಸ ಅವರೊಂದಿಗೆ ಮಾತುಕತೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


