ವಿದೇಶ

ಕಿರ್ಗಿಸ್ಥಾನದಲ್ಲಿ ಎಸ್.ಸಿ.ಓ ಶೃಂಗಸಭೆ, ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿಂಗ್ ಪಿನ್ ಭೇಟಿ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಈ ವಾರ ಬಿಷ್ಕೇಕ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ಕಿರ್ಗಿಸ್ಥಾನದಲ್ಲಿ ಎಸ್.ಸಿ.ಓ ಶೃಂಗಸಭೆ,  ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ  ಜಿಂಗ್ ಪಿನ್ ಭೇಟಿ
ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ ಪಿಂಗ್
Published On :
ಬೀಜಿಂಗ್: ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಈ ವಾರ ಬಿಷ್ಕೇಕ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. 
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬೃಹತ್ ವಿಜಯ ಸಾಧಿಸಿ ಎರಡನೇ ಬಾರಿಗೆ ಮೋದಿ ಭಾರತದ ಪ್ರಧಾನಿಯಾದ ನಂತರ ಇದು ಇಬ್ಬರೂ ನಾಯಕರ ಮೊದಲ ಭೇಟಿಯಾಗಲಿದೆ.
ಜೂನ್ 12 ರಿಂದ 16 ರವರೆಗೆ ಕಿರ್ಗಿಸ್ತಾನ್ ಮತ್ತು ತಜಾಕಿಸ್ಥಾಕ್ಕೆ ಕ್ಸಿ ಭೇಟಿ ನೀಡಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್ ತಿಳಿಸಿದ್ದಾರೆ. ಎಸ್ಸಿಒ ಶೃಂಗಸಭೆ ಕಿರ್ಗಿಸ್ತಾನ್ ಬಿಶ್ಕೆಕ್ ನಲ್ಲಿ ಜೂನ್ 13-14 ರಂದು ನಡೆಯಲಿದೆ.
ಎಸ್ಸಿಒ ಚೀನಾನೇತೃತ್ವದ ಎಂಟು ಸದಸ್ಯರ ಆರ್ಥಿಕ ಮತ್ತು ಭದ್ರತಾ ಸಂಘಟನೆಯಾಗಿದ್ದು ಭಾರತ ಮತ್ತು ಪಾಕಿಸ್ತಾನ 2017ರಿಂದ ಈ ಸಂಘಟನೆಯ ಸದಸ್ಯ ರಾಷ್ಟ್ರಗಳಾಗಿದೆ.
ಚೀನಾದ ಭಾರತೀಯ ರಾಯಭಾರಿಯಾಗಿರುವ ವಿಕ್ರಮ್ ಮಿಸ್ರಿ  ಸಹ ಈ ಮ್ಮುನ್ನ ಇಬ್ಬರು ನಾಯಕರು ಎಸ್ಸಿಒ ಶೃಂಗಸಭೆಯಲ್ಲಿ ಪರಸ್ಪರ ಭೇಟಿ ಆಗಲಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.