ಚೀನಾದಲ್ಲಿ ಭೀಕರ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲು, 12 ಮಂದಿ ಸಾವು!
ಚೀನಾದಲ್ಲಿ ಭೀಕರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0ಯಷ್ಟು ತೀವ್ರತೆ ದಾಖಲಾಗಿದೆ. ಅಂತೆಯೇ ಭೂಕಂಪನದಿಂದ ಸಂಭವಿಸಿದ ವಿವಿಧ ಘಟನೆಗಳಲ್ಲಿ12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Published On :
ಬೀಜಿಂಗ್: ಚೀನಾದಲ್ಲಿ ಭೀಕರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0ಯಷ್ಟು ತೀವ್ರತೆ ದಾಖಲಾಗಿದೆ. ಅಂತೆಯೇ ಭೂಕಂಪನದಿಂದ ಸಂಭವಿಸಿದ ವಿವಿಧ ಘಟನೆಗಳಲ್ಲಿ12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಚೀನಾದ ಸಿಚುವಾನ್ ಪ್ರಾಂತ್ಯದ ಯಿಬಿನ್ ನಗರದಲ್ಲಿ ಸೋಮವಾರ ರಾತ್ರಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಈ ವರೆಗೂ 11 ಮಂದಿ ಸಾವನ್ನಪ್ಪಿದ್ದು, 134 ಮಂದಿ ಗಾಯಗೊಂಡಿದ್ದಾರೆ.
ಚಾಂಗ್‌ನಿಂಗ್ ಕೌಂಟಿಯಲ್ಲಿ ಹೋಟೆಲ್ ವೊಂದರ ಕಟ್ಟಡ ಕುಸಿದುಬಿದ್ದಿದ್ದು, ರಸ್ತೆಗಳು ಬಿರಕುಬಿಟ್ಟಿವೆ ಎಂದು ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ‍್ರಗತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಆರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


