ವಿದೇಶ

'ನಿಮ್ಮೊಂದಿಗೆ ನಾವಿದ್ದೇವೆ'; ಪುಲ್ವಾಮ ದಾಳಿ ಸಂಬಂಧ ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ

ಪುಲ್ವಾಮ ಉಗ್ರ ದಾಳಿ ಬಳಿಕ ಇಂಡೋ-ಪಾಕ್ ಸಂಘರ್ಷ ತಾರಕಕ್ಕೇರಿರುವಂತೆಯೇ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದು, ಪುಲ್ವಾಮ ಉಗ್ರ ದಾಳಿ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

'ನಿಮ್ಮೊಂದಿಗೆ ನಾವಿದ್ದೇವೆ'; ಪುಲ್ವಾಮ ದಾಳಿ ಸಂಬಂಧ ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆ
ಸಂಗ್ರಹ ಚಿತ್ರ
Published On :
ನವದೆಹಲಿ: ಪುಲ್ವಾಮ ಉಗ್ರ ದಾಳಿ ಬಳಿಕ ಇಂಡೋ-ಪಾಕ್ ಸಂಘರ್ಷ ತಾರಕಕ್ಕೇರಿರುವಂತೆಯೇ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದು, ಪುಲ್ವಾಮ ಉಗ್ರ ದಾಳಿ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿರುವ ವ್ಲಾಡಿಮಿರ್ ಪುಟಿನ್ ಅವರು, ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಆತ್ಮಕ್ಕೆ ಶಾಂತಿಕೋರಿದ್ದಾರೆ. ಅಲ್ಲದೆ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಪುಟಿನ್ ಸಾಂತ್ವನ ಹೇಳಿದ್ದು, ಅಂತೆಯೇ ಭಯೋತ್ಪಾದನೆ ವಿರೋಧಿ ಹೋರಾಟದಲ್ಲಿ ರಷ್ಯಾ ಎಂದಿಗೂ ಭಾರತದ ಬೆಂಬಲಕ್ಕೆ ನಿಲ್ಲುತ್ತದೆ. ಭಯೋತ್ಪಾದನೆ ನಿಗ್ರಹ ಹೋರಾಟದಲ್ಲಿ ಭಾರತ ಕೈಗೊಳ್ಳುವ ಯಾವುದೇ ನಡೆಗೂ ರಷ್ಯಾ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ. 
ಇನ್ನು ಪುಟಿನ್ ಅವರ ಭರವಸೆಗೆ ಪ್ರಧಾನಿ ಮೋದಿ ಧನ್ಯವಾದ ಹೇಳಿದ್ದು, ಭಾರತದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡುತ್ತಿರುವ ಗಡಿಯಾಚೆಗಿನ ಉಗ್ರರ ವಿರುದ್ಧ ಹೋರಾಟದಲ್ಲಿ ರಷ್ಯಾದ ಬೆಂಬಲ ಕೋರಿದ್ದಾರೆ ಎನ್ನಲಾಗಿದೆ. ಅಂತೆಯೇ ಭಾರತ ಮತ್ತು ರಷ್ಟಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಅಂತೆಯೇ ಪುಟಿನ್ ರಷ್ಯಾದ ವ್ಲಾಡಿವೋಸ್ಟಾಕ್ ನಲ್ಲಿ ನಡೆಯಲಿರುವ ಈಸ್ಟರ್ನ್ ಎಕನಾಮಿಕ್ ಫೋರಂಗೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.