ಹಳೇ ಚಾಳಿ ಬಿಡದ ಪಾಕಿಸ್ತಾನ, ಮತ್ತೆ ಉಗ್ರ ಸಮರ್ಥನೆ: ಪುಲ್ವಾಮ ದಾಳಿಗೆ ಜೈಶ್ ಕಾರಣವಲ್ಲವಂತೆ!
ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ...

Published On :
ನವದೆಹಲಿ: ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಪಾಕಿಸ್ತಾನ ತನ್ನ ಹಳೆಯ ಚಾಳಿಯನ್ನು ಇನ್ನೂ ಬಿಟ್ಟಿಲ್ಲ.
ಪುಲ್ವಾಮ ದಾಳಿ ಬಗ್ಗೆ ಸಾಕ್ಷ್ಯ ಕೊಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದ್ದ ಪಾಕಿಸ್ತಾನ ಈಗ ವರಸೆ ಬದಲಿಸಿದ್ದು, ಪುಲ್ವಾಮ ದಾಳಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಕಾರಣವಲ್ಲ ಎಂದು ಹೇಳಲು ಪ್ರಾರಂಭಿಸಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯನ್ನು ಸಮರ್ಥಿಸಿಕೊಂಡಿದೆ. ಪುಲ್ವಾಮ ದಾಳಿಯ ಕೆಲವೇ ಕ್ಷಣಗಳಲ್ಲಿ ದಾಳಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿತ್ತು. ಆದರೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಮಾತ್ರ ಪುಲ್ವಾಮ ದಾಳಿಯಲ್ಲಿ ಜೈಶ್-ಉಗ್ರ ಸಂಘಟನೆಯ ಕೈವಾಡ ಇಲ್ಲ ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಪುಲ್ವಾಮ ದಾಳಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಎಲ್ಲಿಯೂ ಹೊಣೆ ಹೊತ್ತುಕೊಂಡಿಲ್ಲ ಎಂದು ಹೇಳಿರುವ ಖುರೇಷಿ, "ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಯಕರನ್ನು ಸಂಪರ್ಕಿಸಿದಾಗ ಅವರು ಇಲ್ಲ ಎಂದು ಹೇಳಿದ್ದರು, ಇದು ಗೊಂದಲಕ್ಕೆ ಕಾರಣವಾಗಿದೆ. ಪುಲ್ವಾಮ ದಾಳಿಗೆ ಹೊಣೆ ಹೊತ್ತಿರುವ ಬಗ್ಗೆ ಗೊಂದಲಗಳಿವೆ. ಪಾಕಿಸ್ತಾನ ಹೇಳುವುದನ್ನು ಭಾರತ ಕೇಳಿದಿದ್ದರೆ ಉಭಯ ರಾಷ್ಟ್ರಗಳ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಭಾರತ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿದರೆ ಮಾತ್ರ ನಾವು ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ನಾವು ಸಹಕಾರ ನೀಡಲು ಸಿದ್ದರಿದ್ದೇವೆ, ಮಾತುಕತೆ ನಡೆಸೋಣ, ಇದೇ ನಮ್ಮ ಮುಂದಿರುವ ಅತ್ಯುತ್ತಮವಾದ ಆಯ್ಕೆ ಎಂದು ಖುರೇಷಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


