ಭಯೋತ್ಪಾದಕ ಸಂಘಟನೆ ಹತ್ತಿಕ್ಕಿ, ಇಲ್ಲ ಅಂದ್ರೆ ನಾವೇ ನುಗ್ಗಿ ಹೊಡಿತೀವಿ; ಪಾಕ್‌ಗೆ ಇರಾನ್ ಎಚ್ಚರಿಕೆ!
ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿ ಬೆನ್ನಲ್ಲೇ ನೆರೆಯ ಇರಾನ್ ಸಹ ಎಚ್ಚರಿಕೆ...

Published On :
ನವದೆಹಲಿ: ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿ ಬೆನ್ನಲ್ಲೇ ನೆರೆಯ ಇರಾನ್ ಸಹ ಎಚ್ಚರಿಕೆ ನೀಡಿದ್ದು ಉಗ್ರ ಸಂಘಟನೆಗಳನ್ನು ಹತ್ತಿಕ್ಕಿ ಇಲ್ಲದಿದ್ದರೆ ಪಾಕ್ ನೊಳಗೆ ನುಗ್ಗಿ ಹೊಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದೆ.
ಭಾರತದ ಏರ್ ಸ್ಟ್ರೈಕ್ ಗೆ ಹಲವು ರಾಷ್ಟ್ರಗಳು ಭಾರತದ ಬೆನ್ನಿಗೆ ನಿಂತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದವು. ಅಮೆರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿ ಕ್ರಮಕೈಗೊಳ್ಳುವ ಬಗ್ಗೆಯೂ ತಿಳಿಸಿದ್ದವು.
ಇದೀಗ ಇರಾನ್ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೇ ಹೋಗಿದ್ದು ನೆರೆಯ ರಾಷ್ಟ್ರಗಳ ಜೊತೆ ನಿಮ್ಮ ಬಾಂಧವ್ಯ ಹೇಗಿದೆ ಎಂಬುವುದು ಗೊತ್ತಿದೆ. ಎಲ್ಲಿ ನೋಡಿದರೂ ಅಶಾಂತಿ ಸೃಷ್ಟಿಸುವುದೇ ನಿಮ್ಮ ಕಾಯಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದು ಪಾಕ್ ಜೊತೆ ತಾನೂ ಹೊಂದಿರುವ ಗಡಿ ಪ್ರದೇಶದಲ್ಲಿ ಬೃಹತ್ ಗೋಡೆ ನಿರ್ಮಿಸುವ ಇರಾನ್ ಸಂಸತ್ ನಲ್ಲೂ ಪ್ರಸ್ತಾಪವಾಗಿದೆ.
ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆಗಳು ಇರಾನ್ ನಲ್ಲೂ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದು ಒಂದೊಮ್ಮೆ ನೀವು ಕ್ರಮಕೈಗೊಳ್ಳಲಿದ್ದಾರೆ ನಾವೇ ಉಗ್ರರ ನೆಲೆಗಳನ್ನು ನಾಶ ಪಡಿಸುತ್ತೇವೆ. ನಮ್ಮ ನಿರ್ಣಯಗಳನ್ನು ಪರೀಕ್ಷೆ ಮಾಡಲು ಮುಂದಾಗ ಬೇಡಿ. ನಿಮ್ಮ ಉಪಟಳದಿಂದ ತೊಂದರೆಗೆ ಒಳಗಾದದ ಒಂದೇ ಒಂದು ನೆರ ದೇಶವೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನterroristಭಯೋತ್ಪಾದಕರುIranಇರಾನ್Balakotಬಾಲಾಕೋಟ್IAF Air strikeಐಎಎಫ್ ಏರ್ ಸ್ಟ್ರೈಕ್JeM Campಜೆಇಎಂ ಕ್ಯಾಂಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


