ನಿಷೇಧಿತ ಉಗ್ರರ ಪಟ್ಟಿಯಿಂದ ಹೆಸರು ತೆಗೆಯುವಂತೆ ಹಫೀಜ್ ಸಲ್ಲಿಸಿದ್ದ ಅರ್ಜಿ ವಜಾ
ಮಹತ್ವದ ಬೆಳವಣಿಗೆಯೊಂದರಲ್ಲಿ ನಿಷೇಧಿತ ಉಗ್ರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆಯುವಂತೆ 2008ರ ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವಸಂಸ್ಥೆ ಇಂದು ವಜಾಗೊಳಿಸಿದೆ.

ನ್ಯೂಯಾರ್ಕ್: ಮಹತ್ವದ ಬೆಳವಣಿಗೆಯೊಂದರಲ್ಲಿ ನಿಷೇಧಿತ ಉಗ್ರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆಯುವಂತೆ 2008ರ ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವಸಂಸ್ಥೆ ಇಂದು ವಜಾಗೊಳಿಸಿದೆ.
ಪುಲ್ವಾಮಾ ದಾಳಿಯ ಹೊಣೆ ಹೊತ್ತುಕೊಂಡಿದ್ದ ಜೈಷ್- ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಝರ್ ನನ್ನು ಜಾಗತಿಕ ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವಂತೆ ಹೊಸ ಮನವಿ ಸ್ವೀಕರಿಸಿದ ನಂತರ ವಿಶ್ವಸಂಸ್ಥೆ 1267 ನಿರ್ಬಂಧ ಸಮಿತಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಲಷ್ಕರ್ -ಇ- ತೊಯ್ಬಾ ಉಗ್ರ ಸಂಘಟನೆ ಉಪ ಸ್ಥಾಪಕನಾಗಿರುವ ಹಫೀಜ್ ಸಯೀದ್ ಕಾರ್ಯ ಚಟುವಟಿಕೆಗಳ ಬಗ್ಗೆ ಹೆಚ್ಚಿನ ವಿಶ್ವಾಸಾರ್ಹ ಮಾಹಿತಿಯನ್ನು ಭಾರತ ನೀಡಿದ ನಂತರ ವಿಶ್ವಸಂಸ್ಥೆಯ 1267 ನಿರ್ಬಂಧ ಸಮಿತಿ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


