ವಿದೇಶ

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ; ಭಾರತಕ್ಕೆ ರಷ್ಯಾ ಕಿವಿಮಾತು

ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹಗಳನ್ನೂ ಹೊಡೆದುರುಳಿಸುವ ಭಾರತದ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಎ-ಸ್ಯಾಟ್ ನ ಯಶಸ್ವೀ ಪರೀಕ್ಷಾರ್ಥ ಉಡಾವಣೆ, ವಿಶ್ವದ ಬಲಿಷ್ಠ ರಾಷ್ಟ್ರಗಳ ಕಣ್ಣು ಕೆಂಪಾಗುವಂತೆ ಮಾಡಿದೆ.

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ; ಭಾರತಕ್ಕೆ ರಷ್ಯಾ ಕಿವಿಮಾತು
ಸಂಗ್ರಹ ಚಿತ್ರ
Published On :
ಮಾಸ್ಕೋ: ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹಗಳನ್ನೂ ಹೊಡೆದುರುಳಿಸುವ ಭಾರತದ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್  ಎ-ಸ್ಯಾಟ್ ನ ಯಶಸ್ವೀ ಪರೀಕ್ಷಾರ್ಥ ಉಡಾವಣೆ, ವಿಶ್ವದ ಬಲಿಷ್ಠ ರಾಷ್ಟ್ರಗಳ ಕಣ್ಣು ಕೆಂಪಾಗುವಂತೆ ಮಾಡಿದೆ. 
ಕ್ಷಿಪಣಿ ಉಡಾವಣೆ ಯಶಸ್ವಿಯಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಚೀನಾ ರಕ್ಷಣಾತ್ಮಕ ಹೇಳಿಕೆ ನೀಡಿದ್ದರೆ. ವಿಶ್ವದ ದೊಡ್ಡಣ್ಣ ಬಾಹ್ಯಾಕಾಶದಲ್ಲಿ ತ್ಯಾಜ್ಯಗಳ ಪ್ರಮಾಣ ಹೆಚ್ಚಾಗುವ ಕುರಿತು ಆತಂಕ ವ್ಯಕ್ತಪಡಿಸಿತ್ತು. ಇದೀಗ ರಷ್ಯಾ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ ಎಂದು ಭಾರತಕ್ಕೆ ಕಿವಿಮಾತು ಹೇಳಿದೆ.
ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಭಾರತದ ಪ್ರತೀಯೊಂದು ಯತ್ನದಲ್ಲಿಯೂ ರಷ್ಯಾ ಕೈ ಜೋಡಿಸಲು ಸಿದ್ಧ. ಆದರೆ ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಸರಿಯಲ್ಲ. ರಷ್ಯಾ-ಚೀನಾದಂತಹ ಸಮಾನ ಮನಸ್ಕ ರಾಷ್ಟ್ರಗಳು ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿಯನ್ನು ವಿರೋಧಿಸುತ್ತವೆ. ಬಾಹ್ಯಾಕಾಶ ಉಪಗ್ರಹಳಿಗೆ ಇದು ಮಾರಣಾಂತಿಕವಾಗಿ ಪರಿಣಮಿಸಬಲ್ಲವು ಎಂದು ರಷ್ಯಾ ಹೇಳಿದೆ.
ಇನ್ನು ಇದೇ ಮಾರ್ಚ್ 27ರಂದು ಭಾರತ ತನ್ನ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್  ಎ-ಸ್ಯಾಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಬಾಹ್ಯಾಕಾಶದಲ್ಲಿದ್ದ ಸಕ್ರಿಯ ಉಪಗ್ರಹವೊಂದನ್ನು ಧ್ವಂಸ ಮಾಡಿತ್ತು. ಆ ಮೂಲಕ ಈ ಸಾಮರ್ಥ್ಯವನ್ನು ಹೊಂದಿದ್ದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಕೀರ್ತಿಗೂ ಭಾರತ ಭಾಜನವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.