ಲಂಕಾದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ತಾರಕಕ್ಕೆ: ಸಾಮಾಜಿಕ ಜಾಲತಾಣಗಳಿಗೆ ತಾತ್ಕಾಲಿಕ ನಿಷೇಧ!
ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಇಸ್ಲಾಮಿಕ್ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ನಂತರ ಮುಸ್ಲಿಂ ವಿರೋಧಿ ಹಿಂಸಾಚಾರ ತಾರಕಕ್ಕೇರಿದೆ.

Published On :
ಕೊಲಂಬೋ: ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಇಸ್ಲಾಮಿಕ್ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ನಂತರ ಮುಸ್ಲಿಂ ವಿರೋಧಿ ಹಿಂಸಾಚಾರ ತಾರಕಕ್ಕೇರಿದೆ.
ಇಸ್ಲಾಮಿಕ್ ಭಯೋತ್ಪಾದಕರ ಕೃತ್ಯಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಿ ಮಸೀದಿಗಳು ಹಾಗೂ ಮುಸ್ಲಿಮರ ಉದ್ದಿಮೆಗಳನ್ನು ಧ್ವಂಸಗೊಳಿಸಲಾಗುತ್ತಿದೆ. ಈ ಘಟನೆಗಳಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಮುಸ್ಲಿಂ ಕೌನ್ಸಿಲ್ ಆಫ್ ಶ್ರೀಲಂಕಾ ಹೇಳಿದೆ.
ಇದೇ ವೇಳೆ ಮುಸ್ಲಿಮರನ್ನು ಗುರಿಯಾಗಿರಿಸಿಕೊಂಡು ನಡೆಸಲಾಗುತ್ತಿರುವ ದಾಳಿಯನ್ನು ತಡೆಗಟ್ಟುವುದಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಫೇಸ್ ಬುಕ್ ನಲ್ಲಿ ಪ್ರಾರಂಭವಾದ ವಾಗ್ವಾದ ಕೊನೆಗೆ ಮಸೀದಿ ಹಾಗೂ ಮುಸ್ಲಿಂ ಮಾಲಿಕತ್ವದ ಅಂಗಡಿಗಳ ಮೇಲೆ ಕಲ್ಲು ತೂರಾಟ, ಮುಸ್ಲಿಂ ವ್ಯಕ್ತಿಗೆ ಥಳಿಸಿರುವ ನಡೆಯುವವರೆಗೂ ಹೋಗಿರುವ ಘಟನೆ ವರದಿಯಾಗಿದೆ. ಇದರಿಂದಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಸಾಮಾಜಿಕ ಜಾಲತಾಣಗಳಿಗೆ ತಾತ್ಕಾಲಿಕ ನಿಷೇಧ ವಿಧಿಸಿದೆ
ಮುಸ್ಲಿಮರ ಮೇಲಿನ ಹಲ್ಲೆಗೆ ಕಾರಣವಾದ ಪೋಸ್ಟ್ ನ್ನು ಬರೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಅಬ್ದುಲ್ ಹಮೀದ್ ಮೊಹಮ್ಮದ್ ಹಂಸರ್ ಎಂದು ಗುರುತಿಸಲಾಗಿದೆ. ಫೇಸ್ ಬುಕ್ ನಲ್ಲಿ ಆತ ಒಂದು ದಿನ ನೀವೆಲ್ಲಾ ಕಣ್ಣೀರಿಡುತ್ತೀರಿ ಎಂದು ಹಿಂಸಾಚಾರ ನಡೆಸುವ ಬೆದರಿಕೆ ಹಾಕಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


