ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ್ದ ಪಾಕ್ ಗಾಯಕಿ ರಬಿ ಪಿರ್ಜಾಡಾ ನಗ್ನ ವಿಡಿಯೋ ವೈರಲ್!
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದತಿ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನದ ಪಾಪ್ ಗಾಯಕಿ ರಬಿ ಪಿರ್ಜಾಡಳ ನಗ್ನ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇಸ್ಲಾಮಾಬಾದ್ :ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದತಿ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನದ ಪಾಪ್ ಗಾಯಕಿ ರಬಿ ಪಿರ್ಜಾಡಾಳ ನಗ್ನ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಖಾಸಗಿ ವಿಡಿಯೋ ವೈರಲ್ ಆಗುತ್ತಿದ್ದಂತೆ ದಿಗಿಲುಗೊಂಡ ರಬಿ ಪಿರ್ಜಾಡಾ, ಇವುಗಳನ್ನು ಪಾರ್ವಡ್ ಮಾಡದಂತೆ ತಡೆಯೊಡುವಂತೆ ಟ್ವೀಟರ್ ಸಂಸ್ಥೆಯನ್ನು ಕೇಳಿಕೊಂಡಿದ್ದಾರೆ. ಯಾವ ಕಾರಣಕ್ಕೆ ಈಕೆಯ ಖಾಸಗಿ ವಿಡಿಯೋಗಳು ಬಹಿರಂಗಗೊಂಡಿವೆ ಎಂಬುದು ತಿಳಿದುಬಂದಿಲ್ಲ.
ಆದಾಗ್ಯೂ, ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರಲ್ ಅಸಿಫ್ ಗಾಫೂರ್ ಜೊತೆಗಿನ ವಾಗ್ವಾದವೇ ಇದಕ್ಕೆ ಕಾರಣ ಎಂದು ಅನೇಕ ಮಂದಿ ಟ್ವೀಟ್ ಮಾಡುತ್ತಿದ್ದಾರೆ.
ಐಟಂ ಸಾಂಗ್ಸ್ ಗಳನ್ನು ಸಮರ್ಥಿಸಿಕೊಂಡ ಗಾಫೂರ್ ಅವರನ್ನು ರಬಿ ಟೀಕಿಸಿದ ನಂತರ ಆಕೆಯ ಖಾಸಗಿ ವಿಡಿಯೋಗಳು ಬಹಿರಂಗವಾಗುತ್ತಿವೆ ಎಂದು ಟ್ವೀಟರ್ ಬಳಕೆದಾರರೊಬ್ಬರು ಹೇಳಿದ್ದಾರೆ. ಆದಾಗ್ಯೂ, ಇದರ ಹಿಂದೆ ಯಾರ ಕೈವಾಡ ಇದೆ ಎಂಬುದು ತಿಳಿದುಬಂದಿಲ್ಲ ಎಂದು ಅನೇಕ ಮಂದಿ ಹೇಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


